ಸಂಡೂರು ಕ್ಷೇತ್ರದ ಅಭ್ಯರ್ಥಿ ಹೆಸರು ಘೋಷಿಸಿದ ಸಿಎಂ

0
19

ಮೈಸೂರು: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆ ಆಗಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಸಂಡೂರಿನಲ್ಲಿ ತುಕಾರಾಂ ಕುಟುಂಬಕ್ಕೆ ಟಿಕೆಟ್ ಫೈನಲ್ ಮಾಡಿದ್ದೇವೆ ಸಂಸದ ತುಕಾರಾಂ ಅವರ ಪತ್ನಿ ಅನ್ನಪೂರ್ಣ ಅವರಿಗೆ ಟಿಕೆಟ್ ನೀಡಲಾಗುವುದು. ಇನ್ನು ಚನ್ನಪಟ್ಟಣ ಶಿಗ್ಗಾವಿ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ಆ ಬಗ್ಗೆ ಶೀಘ್ರದಲ್ಲೇ ತೀರ್ಮಾನ ಮಾಡುತ್ತೇವೆ, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆ ಆಗಬಹುದು ಎಂದರು, ಇನ್ನು ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಯೋಗೇಶ್ವರ್ ಅವರು ಕಾಂಗ್ರೆಸ್‌ಗೆ ಬರುವ ವಿಚಾರ ನನಗೆ ಗೊತ್ತಿಲ್ಲ. ಕಾಂಗ್ರೆಸ್ ತತ್ವ ಸಿದ್ಧಾಂತ ಒಪ್ಪಿ ಯಾರೇ ಬಂದರೂ ಪಕ್ಷಕ್ಕೆ ಸ್ವಾಗತ. ನಮ್ಮ ಅಧ್ಯಕ್ಷರು ಅಲ್ಲೇ ಇದ್ದಾರೆ. ಅವರೇ ತೀರ್ಮಾನ ಮಾಡುತ್ತಾರೆ ಎಂದರು.

Previous articleಕಾಂಗ್ರೆಸ್​ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
Next articleವನ್ಯಜೀವಿ ಸಂರಕ್ಷಣೆಯ ಕಾಲ್ನಡಿಗೆಗೆ ಸಂಸದ ಚಾಲನೆ