Home ತಾಜಾ ಸುದ್ದಿ ಸಂವಿಧಾನ ಉಳಿವಿನ ಹೋರಾಟದಲ್ಲಿ ರವಿಚಂದ್ರನ್ ಸಾವು : ಸಿಎಂ ಸಂತಾಪ

ಸಂವಿಧಾನ ಉಳಿವಿನ ಹೋರಾಟದಲ್ಲಿ ರವಿಚಂದ್ರನ್ ಸಾವು : ಸಿಎಂ ಸಂತಾಪ

0

ಬೆಂಗಳೂರು: ಸಂವಿಧಾನ, ಪ್ರಜಾಪ್ರಭುತ್ವದ ಉಳಿವಿನ ಹೋರಾಟದಲ್ಲಿ ರವಿಚಂದ್ರನ್ ನಿಧನರಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.


ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಆದೇಶ ನೀಡಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳು ಮತ್ತು ಅಲ್ಪ ಸಂಖ್ಯಾತರ ಸಂಘದ ವತಿಯಿಂದ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ‌ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಸಂಘದ ಸದಸ್ಯ, ನಮ್ಮ ಪಕ್ಷದ ಕಾರ್ಯಕರ್ತ ಸಿ.ಕೆ.ರವಿಚಂದ್ರನ್ ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿಯಿತು. ಸಂವಿಧಾನ, ಪ್ರಜಾಪ್ರಭುತ್ವದ ಉಳಿವಿನ ಈ ಹೋರಾಟದಲ್ಲಿ ನಮ್ಮ ಜೊತೆಯಾಗಿದ್ದ ರವಿಚಂದ್ರನ್ ಅವರ ನಿಧನ ಅತೀವು ನೋವುಂಟು ಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ದುಃಖತಪ್ತ ಕುಟುಂಬಸ್ಥರು ಮತ್ತು ಬಂಧುಬಳಗದ ಜೊತೆ ನಾನಿದ್ದೇನೆ ಎಂದಿದ್ದಾರೆ.

Exit mobile version