ಸಂಸತ್ ದಾಳಿಯ ಹುತಾತ್ಮರಿಗೆ ಗೌರವ ನಮನ

0
38

ನವದೆಹಲಿ: ಸಂಸತ್ ಭವನದ ಮೇಲೆ ಉಗ್ರರು ದಾಳಿ ನಡೆಸಿ 23 ವರ್ಷ ಆದ ಹಿನ್ನೆಲೆಯಲ್ಲಿ ಆ ಭಯೋತ್ಪಾದಕ ದಾಳಿಯಲ್ಲಿ ಪ್ರಾಣತ್ಯಾಗ ಮಾಡಿದ ಹುತಾತ್ಮರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಸಂಸತ್‌ನಲ್ಲಿ ಆಯೋಜಿಸಲಾಯಿತು. ಹುತಾತ್ಮ ಯೋಧರ ಸ್ಮರಣಾರ್ಥ ಸಂಸತ್ತಿನ ಆವರಣದಲ್ಲಿ ನಡೆದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ವಿಪಕ್ಷ ನಾಯಕ ರಾಹುಲ್ ಗಾಂಧಿ ಸಹಿತ ಗಣ್ಯರು ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.


ಡಿಸೆಂಬರ್ 13, 2001 ರಂದು ಲಷ್ಕರ್-ಎ-ತೊಯ್ಬಾ ಮತ್ತು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರು ಸಂಸತ್ತಿನ ಮೇಲೆ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಐವರು ದೆಹಲಿ ಪೊಲೀಸ್ ಸಿಬ್ಬಂದಿ, ಕೇಂದ್ರ ಮೀಸಲು ಪೊಲೀಸ್ ಪಡೆಯ ಮಹಿಳಾ ಉದ್ಯೋಗಿ ಮತ್ತು ಇಬ್ಬರು ಸಂಸತ್ ಸಿಬ್ಬಂದಿ ಭಯೋತ್ಪಾದಕರ ವಿರುದ್ಧದ ಹೋರಾಟದಲ್ಲಿ ಹುತಾತ್ಮರಾಗಿದ್ದರು. ಈ ದಾಳಿಯಲ್ಲಿ ಓರ್ವ ನೌಕರ ಮತ್ತು ಫೋಟೋ ಜರ್ನಲಿಸ್ಟ್ ಕೂಡ ಸಾವನ್ನಪ್ಪಿದ್ದರು,

Previous articleಸಿ.ಟಿ.ರವಿ ನೇತೃತ್ವದಲ್ಲಿ ದತ್ತಮಾಲಾಧಾರಿಗಳು ಪಡಿ ಸಂಗ್ರಹ
Next articleಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ