ಸಂಸತ್ ದಾಳಿ: ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ ಮೋದಿ

0
13

ನವದೆಹಲಿ: ಹುತಾತ್ಮರಾದ ಕೆಚ್ಚೆದೆಯ ಭದ್ರತಾ ಸಿಬ್ಬಂದಿಯನ್ನು ನಾವು ಸ್ಮರಿಸುತ್ತೇವೆ ಮತ್ತು ಅವರಿಗೆ ಹೃತ್ಪೂರ್ವಕ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಸಂಸತ್ ಮೇಲೆ ದಾಳಿ ನಡೆದು ಇಂದಿಗೆ 22 ವರ್ಷ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಇಂದು, 2001 ರಲ್ಲಿ ಸಂಸತ್ತಿನ ದಾಳಿಯಲ್ಲಿ ಹುತಾತ್ಮರಾದ ಕೆಚ್ಚೆದೆಯ ಭದ್ರತಾ ಸಿಬ್ಬಂದಿಯನ್ನು ನಾವು ಸ್ಮರಿಸುತ್ತೇವೆ ಮತ್ತು ಅವರಿಗೆ ಹೃತ್ಪೂರ್ವಕ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತೇವೆ. ಅಪಾಯದ ಸಂದರ್ಭದಲ್ಲಿ ಅವರ ಧೈರ್ಯ ಮತ್ತು ತ್ಯಾಗವು ನಮ್ಮ ರಾಷ್ಟ್ರದ ಸ್ಮರಣೆಯಲ್ಲಿ ಶಾಶ್ವತವಾಗಿ ಉಳಿಯುತ್ತದೆ ಎಂದು ಬರೆದುಕೊಂಡಿದ್ದಾರೆ.

Previous article34,115 ಕೋಟಿ ಬಂಡವಾಳ ಹೂಡಿಕೆ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ
Next articleಸಮಾಜ ಸೇವಕ ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ