ಸಂಸದೆ ಪ್ರಿಯಾಂಕಾಗೆ ರಾಜಕೀಯ ಪಾಠ ಮಾಡಿದ ಡಿಸಿಎಂ

0
12

ಬೆಳಗಾವಿ: ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ ಪ್ರಿಯಂಕಾ ಜಾರಕಿಹೊಳಿ ಅವರು ಮಂಗಳವಾರ ಡಿಸಿಎಂ ಡಿ.ಕೆ. ಶಿವಕುಮಾರ ಅವರನ್ನು ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿ, ಆಶೀರ್ವಾದ ಪಡೆದರು.
ತಮ್ಮನ್ನು ಭೇಟಿಯಾಗಿದ್ದ ಪ್ರಿಯಂಕಾ ಜಾರಕಿಹೊಳಿ ಅವರಿಗೆ ಆಶೀರ್ವಾದ ಮಾಡಿದ ಡಿ.ಕೆ. ಶಿವಕುಮಾರ ಅವರು, ರಾಜಕೀಯ ಭವಿಷ್ಯ ಉಜ್ವಲವಾಗಲಿ ಎಂದು ಶುಭ ಹಾರೈಸಿದರು. ಈ ವೇಳೆ ಪ್ರಿಯಂಕಾ ಜಾರಕಿಹೊಳಿ ಅವರಿಗೆ ರಾಜಕೀಯದ ಕುರಿತು ಡಿಕೆಶಿ ಪಾಠ ಮಾಡಿದ್ದು, ಸದನದಲ್ಲಿ ಸದಾ ಹಾಜರಿದ್ದು, ಎಲ್ಲ ಕಲಾಪದಲ್ಲಿ ಸಕ್ರಿಯವಾಗಿ ಭಾಗವಹಿಸಿ, ಶ್ರದ್ಧೆಯಿಂದ ಆಲಿಸಿ, ಸೂಕ್ತವಾಗಿ ಸ್ಪಂದಿಸುವವರು ಮಾತ್ರ ಉತ್ತಮ ಸಂಸದೀಯ ಪಟುವಾಗಿ ಬೆಳೆಯಲು ಸಾಧ್ಯ ಎಂದು ಕಿವಿಮಾತು ಹೇಳಿದರು.

Previous articleಆರ್‌ಟಿಪಿಎಸ್‌ ವಿದ್ಯುತ್‌ ಘಟಕದಲ್ಲಿ ದಾಖಲೆಯ ಉತ್ಪಾದನೆ
Next articleಅಶ್ವತ್ಥಾಮನ ನೆನಪು ಶಾಶ್ವತ