ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

0
15

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್ತಿ(97) ಇಂದು ನಿಧನರಾದರು. ಲಚ್ಚಿಯವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.
ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಲಚ್ಚಿ ಪೂಜಾರ್ತಿ ನಿಧನಕ್ಕೆ ಕುಂದಾಪುರ ಶಾಸಕ ಕಿರಣ್‌ ಕುಮಾರ್‌ ಕೊಡ್ಲಿ, ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ, ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ, ಕಾರ್ಕಳ ಶಾಸಕ ಸುನೀಲ್‌ ಕುಮಾರ್‌ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.

Previous articleಅತಿ ಹೆಚ್ಚು ಸಂವಿಧಾನ ತಿದ್ದುಪಡಿ ಮಾಡಿದ್ದು ಕಾಂಗ್ರೆಸ್
Next articleಬಿ.ಕೆ. ಹರಿಪ್ರಸಾದ ಮುಖ್ಯಮಂತ್ರಿಯಾಗಲಿ