ಸಂಸದ ವಿ. ಶ್ರೀನಿವಾಸ ಪ್ರಸಾದ್ ಸ್ಥಿತಿ ಗಂಭೀರ, ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ

0
15

ಬೆಂಗಳೂರು: ಮಾಜಿ ಕೇಂದ್ರ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಸದ್ಯ ಅವರು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ಅವರ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಪ್ರಸಾದ್‌ ಅವರನ್ನು ದಾಖಲು ಮಾಡಲಾಗಿದೆ. ಸದ್ಯ ಅವರ ಸ್ಥಿತಿ ಗಂಭೀರವಾಗಿದೆ ಅಂತ ಹೇಳಲಾಗುತ್ತಿದೆ. ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ. 76 ವರ್ಷದ ವಿ.ಶ್ರೀನಿವಾಸ್ ಪ್ರಸಾದ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಶುಗರ್, ಬಿಪಿಯಲ್ಲಿ ವ್ಯತ್ಯಯವಾಗಿದೆ. ಆದರೆ, ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ತಜ್ಞ ವೈದ್ಯರ ನಿಗಾದಲ್ಲಿ ಚಿಕಿತ್ಸೆ ಮುಂದುವರೆಯುತ್ತಿದೆ” ಎಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.

Previous articleಶ್ರೀ ಕ್ಷೇತ್ರ ಶಿಬರೂರಿನಲ್ಲಿ ನಟಿ ಶಿಲ್ಪಾ ಶೆಟ್ಟಿ ಪ್ರಾರ್ಥನೆ
Next articleಹಾಸನ ಪೆನ್‌ಡ್ರೈವ್  ಪ್ರಕರಣ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ನಿರ್ಧಾರ