ಸಚಿವರ ಭೈರತಿ ಸುರೇಶ್​ಗೆ ತಾತ್ಕಾಲಿಕ ರಿಲೀಫ್

0
26

ಸಿಎಂ ಪತ್ನಿ ಪಾರ್ವತಿ, ಸಚಿವ ಬೈರತಿಗೆ ತಾತ್ಕಾಲಿಕ ರಿಲೀಫ್: ಇಡಿ ಸಮನ್ಸ್ ಗೆ ತಡೆಯಾಜ್ಞೆ ವಿಸ್ತರಣೆ

ಧಾರವಾಡ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಭೈರತಿ ಸುರೇಶ್ ಹಾಗೂ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ​ಗೆ ಇಡಿ ಸಮನ್ಸ್​ಗೆ​ ನೀಡಿದ್ದ ತಡೆಯಾಜ್ಞೆ ವಿಸ್ತರಣೆಯಾಗಿದೆ.
ಇಡಿ ನೀಡಿರುವ ಸಮನ್ಸ್​ ರದ್ದುಕೋರಿ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ‌ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು, ಮುಂದಿನ ವಿಚಾರಣೆಯನ್ನು ಫೆಬ್ರವರಿ 20ಕ್ಕೆ ಮುಂದೂಡಿದೆ. ಹೀಗಾಗಿ ಫೆ.20ರ ರವರೆಗೆ ಇಡಿ ಸಮನ್ಸ್ ಗೆ ತಡೆಯಾಜ್ಞೆ ವಿಸ್ತರಣೆಯಾಗಿದೆ. ಇದರಿಂದ ಸಿಎಂ ಪತ್ನಿ ಹಾಗೂ ಭೈರತಿ ಸುರೇಶ್​ಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
ಮುಡಾ ಹಗರಣದ ತನಿಖೆ ನಡೆಸುತ್ತಿರೋ ಲೋಕಾಯುಕ್ತ, ಈಗಾಗಲೇ ಧಾರವಾಡ ಹೈಕೋರ್ಟ್ ಪೀಠಕ್ಕೆ ತನಿಖಾ ವರದಿ ಸಲ್ಲಿಸಲಿದ್ದಾರೆ. ಈ ನಡುವೆ ಜಾರಿ ನಿರ್ದೇಶನಾಲಯ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್ ಅವರಿಗೆ ಸಮನ್ಸ್ ನೀಡಿತ್ತು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಇಂದು ವಾದ ಪ್ರತಿವಾದ ಆಲಿಸಿದ ಹೈಕೋರ್ಟ್ ನ್ಯಾಯಪೀಠ, ಫೆಬ್ರವರಿ 20ಕ್ಕೆ ವಿಚಾರಣೆ ಮುಂದೂಡಿದೆ.

Previous articleಲೋಕಾ ಬಲೆಗೆ ಬಿದ್ದ ಕೇಸ್ ವರ್ಕರ್
Next articleಗುವಾಹಟಿಯಲ್ಲಿ ಅತ್ಯಾಧುನಿಕ ವಾಹನ ಸ್ಕ್ರ್ಯಾಪಿಂಗ್ ಘಟಕ ಉದ್ಘಾಟನೆ