Home ತಾಜಾ ಸುದ್ದಿ ಸಚಿವೆ ಹೆಬ್ಬಾಳ್ಕರ್​ ನಿಂದಿಸಿದ ಪ್ರಕರಣ: ಸಿಟಿ ರವಿಗೆ ತಾತ್ಕಾಲಿಕ ರಿಲೀಫ್‌

ಸಚಿವೆ ಹೆಬ್ಬಾಳ್ಕರ್​ ನಿಂದಿಸಿದ ಪ್ರಕರಣ: ಸಿಟಿ ರವಿಗೆ ತಾತ್ಕಾಲಿಕ ರಿಲೀಫ್‌

0

ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ವಿಧಾನ ಪರಿಷತ್‌ನಲ್ಲಿ ಅಶ್ಲೀಲ ಪದ ಬಳಕೆಯ ಪ್ರಕರಣದಲ್ಲಿ ಬಿಜೆಪಿ ಪರಿಷತ್‌ ಸದಸ್ಯ ಸಿಟಿ ರವಿ ಅವರಿಗೆ ಹೈಕೋರ್ಟ್‌ ತಾತ್ಕಾಲಿಕ ರಿಲೀಫ್‌ ನೀಡಿದೆ.
ಬೆಳಗಾವಿಯ ಹಿರೇಬಾಗೇವಾಡಿ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದತಿ ಕೋರಿ ಬಿಜೆಪಿಯ ಎಂಎಲ್‌ಸಿ ಸಿ ಟಿ ರವಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ತನಿಖೆಯ ವ್ಯಾಪ್ತಿಯ ಪ್ರಶ್ನೆಯನ್ನು ತೀರ್ಮಾನಿಸಬೇಕಿದೆ ಎಂದು ಅಭಿಪ್ರಾಯಪಟ್ಟು ಫೆ.20 ರವರೆಗೆ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ ಮಧ್ಯಂತರ ತಡೆ ನೀಡಿ ನೀಡಿ ದೂರುದಾರೆ ಲಕ್ಷ್ಮಿ ಹೆಬ್ಬಾಳ್ಕರ್ ನೋಟಿಸ್‌ ಜಾರಿ ಮಾಡಿದೆ. ಅರ್ಜಿದಾರರು ಮತ್ತು ಸರ್ಕಾರದ ವಾದ ಪ್ರತಿವಾದ ಆಲಿಸಿದ ಪೀಠವು ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಹ್ಯಾಂಡ್ಸ್‌ ಸಮನ್ಸ್‌ ಜಾರಿ ಮಾಡಿದ ನ್ಯಾಯಾಲಯ. ವಿಚಾರಣಾಧೀನ ನ್ಯಾಯಾಲಯದಲ್ಲಿನ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿದ ಪೀಠ. ಫೆಬ್ರವರಿ ೨೦ಕ್ಕೆ ನ್ಯಾಯಾಲಯ ಮುಂದೂಡಿದೆ.

Exit mobile version