ಚಿತ್ರದುರ್ಗ: ಶಾಂತಿಯುತ ರಾಜ್ಯದಲ್ಲಿ ಸಚಿವ ಜಮೀರ್ ಅಹ್ಮದ್ ಅವರಿಂದ ಬೆಂಕಿ ಹಚ್ಚುವ ಕೆಲಸ ಆಗುತ್ತಿದೆ. ಅವರನ್ನು ಗಡಿಪಾರು ಮಾಡಿದ್ರೆ ರಾಜ್ಯಕ್ಕೆ ಒಳ್ಳೆಯದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಹಿಂದ ಹೆಸರು ಹೇಳಿ ಅಹಿಂದ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದ್ದಾರೆ. ಹಿಂದೂಗಳ ಆಸ್ತಿ, ರೈತರ ಜಮೀನು, ಮಠ ಮಾನ್ಯಗಳ ಆಸ್ತಿ ಕಬಳಿಸುವ ಕೆಲಸ ಆಗುತ್ತಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊಸಳೆ ಕಣ್ಣೀರು ಹಾಕ್ತಿದ್ದಾರೆ. ರೈತರಿಗೆ ನೀಡಿದ ನೋಟಿಸ್ ಹಿಂಪಡೆಯುವುದಾಗಿ ಹೇಳಿದ್ದಾರೆ. ತಾಕತ್ತಿದ್ದರೆ ಗೆಜೆಟ್ ನೋಟಿಫಿಕೇಷನ್ ಹಿಂಪಡೆಯಲಿ ಎಂದು ಸವಾಲ್ ಹಾಕಿದ್ದಾರೆ.