ಸಚಿವ ತಂಗಡಗಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

0
20
ತಂಗಡಗಿ

ಬೆಂಗಳೂರು: ಮೋದಿ ಮೋದಿ ಎನ್ನುವ ಯುವಕರ ಕಪಾಳಕ್ಕೆ ಹೊಡೆಯಿರಿ ಎಂಬುದಾಗಿ ಹೇಳಿಕೆ ನೀಡಿರುವ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಮುಖ್ಯ ಚುನಾವಣಾಧಿಕಾರಿಗೆ ಈ ಕುರಿತು ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಬಿಜೆಪಿ ರಾಜ್ಯ ವಕ್ತಾರ ವೆಂಕಟೇಶ್ ದೊಡ್ಡೇರಿ, ರಾಜ್ಯ ಸಂಚಾಲಕ ವಸಂತ್ ಕುಮಾರ್ ದೂರು ನೀಡಿದ್ದಾರೆ.
ಸಚಿವ ಶಿವರಾಜ ತಂಗಡಗಿ ಭಾನುವಾರ ಕೊಪ್ಪಳ ಜಿಲ್ಲೆ ಕಾರಟಗಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ದ್ವೇಷ ಭಾಷಣ ಮಾಡಿದ್ದಾರೆ. ಇದು ಚುನಾವಣಾ ನೀತಿಯ ಸ್ಪಷ್ಟ ಉಲ್ಲಂಘನೆ ಇವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.

Previous articleಪ್ರಧಾನಿ ಬಗ್ಗೆ ಅವಹೇಳನ ಸಚಿವರ ವಿರುದ್ಧ ಪ್ರಕರಣ
Next articleಅಂತರ್ಜಾತಿ ವಿವಾಹಕ್ಕೆ ೨ ಲಕ್ಷ ರೂ. ಪ್ರೋತ್ಸಾಹಧನ