ಸನಾತನ ಧರ್ಮವನ್ನು ಟೀಕೆ ಮಾಡಿದ್ದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರಪ್ರದೇಶದಲ್ಲಿ ಎಫ್‍ಐಆರ್ ದಾಖಲಾಗಿದೆ. ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಕುರಿತು ಕರೆ ನೀಡಿದ್ದರು. ಇವರ ಹೇಳಿಕೆಯನ್ನು ಖರ್ಗೆ ಬೆಂಬಲಿಸಿದ್ದರು. ಹೀಗಾಗಿ ವಕೀಲರಾದ ಹರ್ಷಗುಪ್ತಾ ಮತ್ತು ರಾಮ್ ಸಿಂಗ್ ಲೋಧಿ ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.
