ಕುಷ್ಟಗಿ: ಅತ್ಯಂತ ಹಿಂದುಳಿದ ವರ್ಗದವರೂ ಸಹ ರಾಜ್ಯ ಆಳುವಂತಾಗಬೇಕು ಅದರಲ್ಲಿ ವಿಶೇಷವಾಗಿ ಸಚಿವ ಸತೀಶ ಜಾರಕಿಹೊಳಿ ಮುಖ್ಯಮಂತ್ರಿಯಾಗಬೇಕು ಎಂದು ಶಾಸಕ ಹಾಗೂ ವಿರೋಧ ಪಕ್ಷದ ಮುಖ್ಯಸಚೇತಕ ದೊಡ್ಡನಗೌಡ ಪಾಟೀಲ್ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿ, ಹಿಂದುಳಿದವರು, ತುಳಿತಕ್ಕೊಳಗಾದವರು ಉನ್ನತ ಹುದ್ದೆ ಅಲಂಕರಿಸಬೇಕು. ವಾಲ್ಮೀಕಿ ಸಮುದಾಯದ ಆಶಯದಂತೆ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ರಾಜ್ಯದ ಮುಖ್ಯಮಂತ್ರಿಯಾಗಬೇಕಿದೆ. ರಮೇಶ್ ಜಾರಕಿಹೊಳಿ ಸಹ ಮುಖ್ಯಮಂತ್ರಿ ಸ್ಥಾನಕ್ಕೆ ಸೂಕ್ತ ಅಭ್ಯರ್ಥಿಯಾಗಿದ್ದಾರೆ ಎಂದಿದ್ದಾರೆ.