Home ತಾಜಾ ಸುದ್ದಿ ಸದ್ಯ ಸಿಎಂ ಸ್ಥಾನದ ರೇಸ್‌ನಲ್ಲಿ ನಾನಿಲ್ಲ, 2028ಕ್ಕೆ ತಯಾರಿ

ಸದ್ಯ ಸಿಎಂ ಸ್ಥಾನದ ರೇಸ್‌ನಲ್ಲಿ ನಾನಿಲ್ಲ, 2028ಕ್ಕೆ ತಯಾರಿ

0
satish

ಬೆಳಗಾವಿ: ನಾನು ಸಿಎಂ ಆಗುವ ಸಂಬಂಧ ಅಗತ್ಯ ತಯಾರಿ ಮಾಡುತ್ತಿದ್ದು ಅದು ಈಗ ಆಗಲು ಅಲ್ಲ, ಬದಲಾಗಿ 2028ಕ್ಕೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದು, ಅಲ್ಲಿಯವರೆಗೆ ಅಭಿಮಾನಿಗಳು ಸಮಾಧಾನದಿಂದ ಕಾಯಬೇಕು ಎಂದಿದ್ದಾರೆ.
ಸಿಎಂ ಸಿದ್ದರಾಮಯ್ಯ ಮುಡಾ ಪ್ರಕರಣದ ಇಕ್ಕಟ್ಟಿಗೆ ಸಿಲುಕಿದ ನಂತರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಬದಲಾವಣೆ ಹಾಗೂ ಯಾರು ರೇಸ್‌ನಲ್ಲಿದ್ದಾರೆ ಎಂಬ ಚರ್ಚೆ ಮುನ್ನೆಲೆ ಬರುತ್ತಿರುವುದರಿಂದ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಆಗಿ ಸಿದ್ದರಾಮಯ್ಯ ಅವರೇ ಮುಂದುವರಿಯುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಸದ್ಯ ನಾನು ಸಿಎಂ ಸ್ಥಾನದ ರೇಸ್‌ನಲ್ಲಿ ಇಲ್ಲ. ನಾನು ಸದ್ಯಕ್ಕೆ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯೂ ಅಲ್ಲ. ಈಗಲೇ ಅನೇಕರು ಸಿಎಂ ಆಗುವ ಆಸೆ ವ್ಯಕ್ತಪಡಿಸಿದ್ದಾರೆ. ಇದರಲ್ಲಿ ಗುದ್ದಾಟ, ಕುಸ್ತಿ ಮಾಡುವ ಅವಶ್ಯಕತೆ ಇಲ್ಲ. ರಾಜ್ಯದಲ್ಲಿ ಅಂತಹ ಯಾವುದೇ ಸನ್ನಿವೇಶವೂ ಇಲ್ಲವೇ ಇಲ್ಲ. ನಾನಂತೂ ಈಗಾಗಲೇ ಸಿದ್ದರಾಮಯ್ಯನವರಿಗೆ ಬೆಂಬಲ ನೀಡಿದ್ದೇನೆ ಎಂದು ಸತೀಶ್‌ ಅವರು ಹೇಳಿದ್ದಾರೆ.

Exit mobile version