ಸರ್ಕಾರದಿಂದ ಹೆಸರು ಬದಲಾವಣೆಗೆ ಗ್ರೀನ್​ಸಿಗ್ನಲ್: ರಾಮನಗರ ಜಿಲ್ಲೆ ಇನ್ಮುಂದೆ ಬೆಂಗಳೂರು ದಕ್ಷಿಣ

ಬೆಂಗಳೂರು: ರಾಮನಗರ ಜಿಲ್ಲೆಯನ್ನು ‘ಬೆಂಗಳೂರು ದಕ್ಷಿಣ ಜಿಲ್ಲೆ’ ಎಂದು ಮರು ನಾಮಕರಣ ಮಾಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಇವತ್ತಿನ ಸಭೆಯಲ್ಲಿ ರಾಮನಗರ ಜಿಲ್ಲೆಯ ಹೆಸರು ಬದಲಾಯಿಸುವ ಬಗ್ಗೆ ನಿರ್ಧಾರ ಮಾಡಲಾಗಿದೆ. ಅಧಿಕೃತವಾಗಿ ಈ ಸಂಬಂಧ ಆದೇಶ ಹೊರ ಬೀಳಲಿದೆ. ಇನ್ಮುಂದೆ ರಾಮನಗರ ಹೆಡ್ ಕ್ವಾಟ್ರಸ್ ಆಗಿರಲಿದೆ, ರಾಮನಗರದ ಜಿಲ್ಲಾ ಕೇಂದ್ರದಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ. ಆದರೆ ಬೆಂಗಳೂರು ದಕ್ಷಿಣ ಎಂದು ರಾಮನಗರ ಜಿಲ್ಲೆಗೆ ಮರುನಾಮಕರಣ ಮಾಡಲಾಗಿದೆ, ಜಿಲ್ಲೆಯ ಹೆಸರು ಬದಲಾವಣೆಗೆ ರಾಜ್ಯಕ್ಕೆ ಅಧಿಕಾರವಿದೆ. ರಾಮನಗರ ಹೆಸರು ಬದಲಾವಣೆಗೆ ಈ ಹಿಂದೆ ಕೇಂದ್ರ ಸರ್ಕಾರ ಒಪ್ಪಿರಲಿಲ್ಲ. ಆದರೆ ಕೇಂದ್ರಕ್ಕೆ ತಿಳಿಸಬೇಕಿತ್ತು ತಿಳಿಸಿದ್ದೇವೆ ಎಂದರು.