Home ನಮ್ಮ ಜಿಲ್ಲೆ ಚಿಕ್ಕಮಗಳೂರು ಸರ್ಕಾರದ ವಿರುದ್ಧ ಫೋಸ್ಟರ್ ಪ್ರತಿಭಟನೆ

ಸರ್ಕಾರದ ವಿರುದ್ಧ ಫೋಸ್ಟರ್ ಪ್ರತಿಭಟನೆ

0

ಚಿಕ್ಕಮಗಳೂರು: ಬಿಜೆಪಿ ಯುವಮೋರ್ಚಾದಿಂದ ರಾಜ್ಯ ಸರ್ಕಾರದ ವಿರುದ್ಧ ವ್ಯಂಗ್ಯ ಹಾಗೂ ಆಕ್ರೋಶದ ಫೋಸ್ಟರ್ ಅಂಟಿಸುವ ಮೂಲಕ ವಿಭಿನ್ನ ಪ್ರತಿಭಟನೆ ನಡೆಸಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಶ್ಯಾಡೋ ಸಿ.ಎಂ ಪೋಸ್ಟರ್ ಅಂಟಿಸಿದ್ದಾರೆ.ನಗರದ ತಾಲೂಕು ಆಫೀಸ್, ಮೆಸ್ಕಾಂ ಕಚೇರಿ, ತಾಲೂಕು ಪಂಚಾಯಿತಿ, ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಅಭಿಯಾನ ನಡೆಸಲಾಗಿದೆ.

ಚಿಕ್ಕಮಗಳೂರು ನಗರದ ವಿವಿದೆಡೆ ಪೋಸ್ಟರ್ ಅಭಿಯಾನ ನಡೆಸಿರೋ ಬಿಜೆಪಿ ಕಾರ್ಯಕರ್ತರು ಮುಂಜಾನೆಯೇ ಪ್ರತಿಭಟನೆಗೆ ಇಳಿದಿದ್ದಾರೆ. ವ್ಯಂಗ್ಯ ಚಿತ್ರದ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯವನ್ನ ಕತ್ತಲೆಗೆ ದೂಡಿ ಇಂಧನ ಸಚಿವರು ನಾಪತ್ತೆ ಎಂದು ಪೋಸ್ಟರ್ ಹಾಕಿದ್ದು, ಕೆ.ಜೆ.ಜಾರ್ಜ್ ಇಂಧನ ಸಚಿವ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕಾಣೆ ಎಂದು ಪೋಸ್ಟ್ ಸಹಾ ಅಂಟಿಸಲಾಗಿದೆ.

ಈ ತಿಂಗಳ ಕಪ್ಪ ಎಲ್ಲಿ ಎಂದು ಪ್ರಶ್ನೆ ಕೇಳಿರೋ ಸೋನಿಯಾ ಗಾಂಧಿ ರೀತಿಯ ಪೋಸ್ಟರ್ ಸಹಾ ಅಂಟಿಸಲಾಗಿದೆ.ಅದಕ್ಕೆ ಉತ್ತರ ಎಂಬಂತೆ ಈಗ ತಾನೇ ವಿದ್ಯುತ್ ಬಿಲ್ ಹೆಚ್ಚಳವಾಗಿದೆ ಎಂದು ದೂರಲಾಗಿದೆ.

ಇರೀ ಮ್ಯಾಮ್ ಎನ್ನುತ್ತಿರೋ ಇಂಧನ ಸಚಿವರ ಫೋಟೋ ಅಲ್ಲದೇ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳ ವಿರುದ್ಧ ವ್ಯಂಗ್ಯ-ಆಕ್ರೋಶದಿಂದ ಕೂಡಿದ ಪೋಸ್ಟರ್ ಗಳನ್ನು ಅಂಟಿಸಿದ್ದಾರೆ.
ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ

Exit mobile version