ಸರ್ಕಾರದ ಸ್ವಾಧೀನದಿಂದ ದೇಗುಲ ಮುಕ್ತಗೊಳಿಸಿ

0
18

ಅಯೋಧ್ಯೆ: ಸರ್ಕಾರದ ಸ್ವಾಧೀನದಿಂದ ದೇಗುಲ ಮುಕ್ತಗೊಳಿಸಿ. ಹಿಂದೂಗಳ ಸಂಸ್ಥೆಗೆ ತಿರುಪತಿ ದೇವಾಲಯದ ಆಡಳಿತ ನೀಡಿ ಎಂದು ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನ ಸ್ವಾಮೀಜಿ ಹೇಳಿದ್ದಾರೆ.
ಅಯೋಧ್ಯೆಯಲ್ಲಿ ತಿರುಪತಿ ಲಡ್ಡು ವಿವಾದದ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಿರುಪತಿ ಲಡ್ಡು ಪ್ರಸಾದಕ್ಕೆ ಹಸುವಿನ ತುಪ್ಪದ ಬದಲು ಕಲಬೆರಕೆ ತುಪ್ಪ ಹಾಕಿದ್ದಾರೆ. ಇದು ಹಿಂದೂ ಸಮಾಜಕ್ಕೆ ಬಗೆದಿರುವ ದೊಡ್ಡ ಅಪಚಾರ. ಸರ್ಕಾರವೇ ಈ ಕೃತ್ಯ ನಡೆಸಿರುವುದು ಖಂಡನಾರ್ಹ ಎಂದು ಕಿಡಿಕಾರಿದರು.
ಸರ್ಕಾರದ ಹಿಡಿತ ಧಾರ್ಮಿಕ ಶ್ರದ್ಧಾ ಕೇಂದ್ರಗಳು ಇರಬಾರದು. ಹಿಂದೂ ಸಮಾಜದ ಕೈಯಲ್ಲಿ ಶ್ರದ್ಧಾ ಕೇಂದ್ರಗಳು ಇರಬೇಕು. ಸರ್ವೋಚ್ಚ ನ್ಯಾಯಾಲಯದ ತೀರ್ಪು ಹೀಗೆ ಹೇಳಿದೆ ಎಂದರು.

Previous articleತಿಮ್ಮಪ್ಪನ ಪ್ರಸಾದ ವಿಚಾರದಲ್ಲಿ ದೊಡ್ಡ ದ್ರೋಹ
Next articleತುಂಗಭದ್ರಾ ಭರ್ತಿ ಮಳೆರಾಯನಿಗೆ ಸಿಎಂ ಧನ್ಯವಾದ