Home ತಾಜಾ ಸುದ್ದಿ ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ

ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ

0

ಮಹಾನಗರ ಪಾಲಿಕೆಯು ಬೆಳಿಗ್ಗೆ 8.30ರಿಂದ ಸಂಜೆ 5ರವರೆಗೆ, ಕೇಂದ್ರ ಸರ್ಕಾರಿ ಕಚೇರಿಗಳು ಬೆಳಿಗ್ಗೆ 9ರಿಂದ ಸಂಜೆ 5.30

ನವದೆಹಲಿ: ಹೆಚ್ಚಿದ ಮಾಲಿನ್ಯದಿಂದಾಗಿ ಸರ್ಕಾರಿ ಕಚೇರಿಗಳ ಸಮಯ ಬದಲಾಯಿಸಿ ಮುಖ್ಯಮಂತ್ರಿ ಅತಿಶಿ ಆದೇಶಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯ ಪ್ರಮಾಣ ತಗ್ಗಿಸುವ ನಿಟ್ಟಿನಲ್ಲಿ ಸರ್ಕಾರಿ ಕಚೇರಿಗಳ ಸಮಯದಲ್ಲಿ ಬದಲಾವಣೆ ಮಾಡಿದ್ದು ದೆಹಲಿ ಮಹಾನಗರ ಪಾಲಿಕೆಯು ಬೆಳಿಗ್ಗೆ 8.30ರಿಂದ ಸಂಜೆ 5ರವರೆಗೆ, ಕೇಂದ್ರ ಸರ್ಕಾರಿ ಕಚೇರಿಗಳು ಬೆಳಿಗ್ಗೆ 9ರಿಂದ ಸಂಜೆ 5.30 ಹಾಗೂ ದೆಹಲಿ ಸರ್ಕಾರದ ಕಚೇರಿಗಳು ಬೆಳಿಗ್ಗೆ 10ರಿಂದ ಸಂಜೆ 6.30ರವರೆಗೆ ಕಾರ್ಯ ನಿರ್ವಹಿಸಲಿವೆ ಎಂದು ತಿಳಿಸಿದ್ದಾರೆ.

Exit mobile version