ಸರ್ಕಾರಿ ನೌಕರರ ಸಂಘಕ್ಕೆ ಅಧ್ಯಕ್ಷರಾಗಿ ಷಡಾಕ್ಷರಿ ಪುನರಾಯ್ಕೆ

0
26

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಹಾಲಿ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಪುನರಾಯ್ಕೆ ಆಗಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-2029ನೇ ಅವಧಿಯ ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಖಜಾಂಚಿ ಸ್ಥಾನದ ಚುನಾವಣೆಯು ಬೆಂಗಳೂರಿನ ಕಬ್ಬನ್‌ಪಾರ್ಕ್‌ ಆವರಣದಲ್ಲಿ ಇಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ನಗರದ ಕಬ್ಬನ್ ಪಾರ್ಕ್​​ನಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆವರಣದಲ್ಲಿ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಸಿ.ಎಸ್.ಷಡಾಕ್ಷರಿಗೆ 507 ಮತಗಳು ಬಂದರೆ, ಬಿ.ಪಿ.ಕೃಷ್ಣಗೌಡಗೆ 442 ಮತಗಳು ಲಭಿಸಿದ್ದವು. ಖಚಾಂಜಿ ಸ್ನಾನಕ್ಕೆ ಸ್ಪರ್ಧಿಸಿದ್ದ ಅಭ್ಯರ್ಥಿ ನಾಗರಾಜ ಆರ್.ಜುಮ್ಮನ್ನವರ(ಷಡಾಕ್ಷರಿ ಬಣ), ವಿ.ವಿ.ಶಿವರುದ್ರಯ್ಯ (ಬಿ.ಪಿ.ಕೃಷ್ಣಗೌಡ ಬಣ) ವಿರುದ್ಧ ಕೇವಲ 18 ಮತಗಳ ಅಂತರದಿಂದ ಸೋಲು ಅನುಭವಿಸಿದರು. ವಿ.ವಿ.ಶಿವರುದ್ರಯ್ಯ 485 ಮತ ಪಡೆದರೆ, ನಾಗರಾಜ ಆರ್.ಜುಮ್ಮನ್ನವರಗೆ 467 ಮತಗಳು ಬಂದಿವೆ.

Previous articleಸುಜುಕಿ ಕಂಪನಿಯ ಮಾಜಿ ಚೇರ್ಮನ್‌ ಒಸಾಮು ಸುಜುಕಿ ನಿಧನ
Next articleಇಸ್ರೇಲ್‌ ಮೂಲದ ಖ್ಯಾತ ಡಿಜೆ ಸಜಂಕಾ ಕಾರ್ಯಕ್ರಮ ರದ್ದು