Home ತಾಜಾ ಸುದ್ದಿ ಸರ್ಕಾರಿ ಶಾಲಾ ಶಿಕ್ಷಣದ ಗುಣಮಟ್ಟ ಹಚ್ಚಳಕ್ಕೆ ಅಗತ್ಯ ಕ್ರಮ: ಶಾಸಕ‌ ಬಂಡಿಸಿದ್ದೇಗೌಡ

ಸರ್ಕಾರಿ ಶಾಲಾ ಶಿಕ್ಷಣದ ಗುಣಮಟ್ಟ ಹಚ್ಚಳಕ್ಕೆ ಅಗತ್ಯ ಕ್ರಮ: ಶಾಸಕ‌ ಬಂಡಿಸಿದ್ದೇಗೌಡ

0

ಶ್ರೀರಂಗಪಟ್ಟಣ : ತಾಲ್ಲೂಕಿನಾದ್ಯಂತೆ ಸರ್ಕಾರಿ‌ ಶಾಲೆಗಳನ್ನು ಅಭಿವೃದ್ದಿ‌ ಪಡಿಸುವುದರ ಜೊತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಳಕ್ಕೆ ಅಗತ್ಯ ಕ್ರಮ‌ ಕೈಗೊಳ್ಳಲಾಗುವುದು ಎಂದು ಶಾಸಕ‌ ರಮೇಶ್ ಬಂಡಿಸಿದ್ದೇಗೌಡ ತಿಳಿಸಿದರು.

ತಾಲ್ಲೂಕಿನ ಹಂಗರಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿದ್ದ ಶ್ರೀರಾಮ ದೇವಾಲಯದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಬಳಿಕ ಗ್ರಾಮದಲ್ಲಿ ನವೀಕರಿಸಲಾದ ಸರ್ಕಾರಿ ಶಾಲೆಯನ್ನು ಉದ್ಘಾಟಿಸಿ ಜೊತೆಗೆ ಗ್ರಾಮದ ರಸ್ತೆ ಮತ್ತು ಚರಂಡಿ ಅಭಿವೃದ್ದಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ತಾಲ್ಲೂಕಿನಲ್ಲಿ ಸರ್ಕಾರಿ ಶಾಲೆಗಳ ಉಳಿವಿಗೆ ಕ್ರಮ‌ ಕೈಗೊಳ್ಳಲಾಗುತ್ತಿದ್ದು, ಹಳೆಯ ಕಟ್ಟಡಗಳನ್ನು ನವೀಕರಿಸಿ ಸುಸಜ್ಜಿತ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ. ಶಿಕ್ಷಕರು ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ‌ ಒತ್ತು ನೀಡಬೇಕಿದ್ದು, ವಿದ್ಯಾರ್ಥಿಗಳನ್ನು ಉತ್ತಮ ಸತ್ಪ್ರಜೆಗಳನ್ನಾಗಿ ರೂಪಿಸುವ ಹೊಣೆಗಾರಿಕೆ ಹೊರಬೇಕೆಂದರು.

ಈ ವೇಳೆ ಗ್ರಾಮಸ್ಥರು, ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Exit mobile version