ಸರ್ಕಾರಿ ಹುದ್ದೆಗಳ ಹೊಸ ನೇಮಕಾತಿಗೆ ತಡೆ

0
51
ವಿಧಾನಸೌಧ

ಬೆಂಗಳೂರು: ರಾಜ್ಯ ಸರ್ಕಾರಿ ಹುದ್ದೆಗಳ ನೇಮಕಾರಿಗೆ ಹೊಸದಾಗಿ ಅಧಿಸೂಚನೆ ಹೊರಡಿಸುವುದಕ್ಕೆ ತಡೆ ನೀಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಸುತ್ತೋಲೆ ಹೊರಡಿಸಿದೆ.
ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಕುರಿತಂತೆ ತೀರ್ಮಾನ ಕೈಗೊಳ್ಳುವವರೆಗೆ, ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಯಾವುದೇ ಅಧಿಸೂಚನೆ ಹೊರಡಿಸಬಾರದು ಎಂದು ಅ. ೨೮ರಂದು ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಈ ನಿರ್ಣಯಕ್ಕೆ ಪೂರಕವಾಗಿ ಈ ಆದೇಶ ಹೊರಡಿಸಲಾಗಿದೆ.
ನೇರ ನೇಮಕಾತಿಗೆ ಅ. ೨೮ಕ್ಕೂ ಮೊದಲು ಅಧಿಸೂಚನೆ ಹೊರಡಿಸಿದ್ದರೆ ಅಥವಾ ಆಯ್ಕೆ ಪ್ರಕ್ರಿಯೆಯನ್ನು ಆರಂಭಿಸಿದ್ದರೆ, ಅಂತಹ ನೇಮಕಾತಿಗಳಿಗೆ ಈ ಸುತ್ತೋಲೆ ಅನ್ವಯಿಸುವುದಿಲ್ಲ ಎಂದೂ ಸುತ್ತೋಲೆಯಲ್ಲಿ ವಿವರಿಸಲಾಗಿದೆ.

Previous articleಹೋರಾಟ ಮಾಡದಿದ್ರೂ ಪರ್ವಾಗಿಲ್ಲ, ಆದ್ರೆ ಮಾರಾಟ ಆಗ್ಬೇಡ…
Next articleಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದವ ಬಾವಿಗೆ ಹಾರಿ ಆತ್ಮಹತ್ಯೆ