ಬೆಂಗಳೂರು: ರಾಜ್ಯದಲ್ಲಿ ರಸ್ತೆ ಕಾಮಗಾರಿ ಮಾಡಿರುವ ಗುತ್ತಿಗೆದಾರರಿಗೆ ಹಣ ನೀಡದಷ್ಟು ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಸಂಯುಕ್ತ ಕರ್ನಾಟಕ ಪತ್ರಿಕೆ ಯಲ್ಲಿ ಪ್ರಕಟವಾಗಿರುವ ಸರ್ಕಾರ ದಿಂದ ಗುತ್ತಿಗೆದಾರರಿಗೆ ೬೪ ಸಾವಿರ ಕೋಟಿ ರೂ. ಬಾಕಿ ಎಂಬ ವರದಿಯನ್ನು ಸಾಮಾ ಜಿಕ ಜಾಲತಾಣ ಎಕ್ಸ್ನಲ್ಲಿ ಹಂಚಿ ಕೊಂಡಿರುವ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರದ ಬಳಿ ರಸ್ತೆ ಗುಂಡಿಗೆ ಒಂದು ಬುಟ್ಟಿ ಮಣ್ಣು ಹಾಕಲೂ ದುಡ್ಡಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿರುವುದು ಅಕ್ಷರಶಃ ನಿಜವಾಗಿದೆ.
ಸರ್ಕಾರದ ಬೊಕ್ಕಸ ಬರಿದಾಗಿಲ್ಲ, ರಾಜ್ಯದ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ ಎಂದು ಸುಳ್ಳು ಹೇಳುತ್ತಲೇ ಬಂದಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗುತ್ತಿಗೆದಾರರಿಗೆ ೬೪,೦೦೦ ಕೋಟಿ ರೂಪಾಯಿ ಬಿಲ್ ಬಾಕಿ ಉಳಿಸಿಕೊಂಡಿದೆ. ಎಂದು ಆರೋಪ ಮಾಡಿದ್ದಾರೆ. ಸರ್ಕಾರದ ಮೇಲೆ ಕ್ರಿಮಿನಲ್ ಮೊಕದ್ದಮೆಗಳು ದಾಖಲಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ತಮ್ಮ ಅಧಿಕಾರದ ದುರಾಸೆಗೆ ಕರ್ನಾಟಕದ ಆರ್ಥಿಕ ಪರಿಸ್ಥಿತಿಯನ್ನ ಯಾವ ದುಸ್ಥಿತಿಗೆ ತಂದಿಟ್ಟಿದ್ದೀರಿ ನೋಡಿ ಎಂದು ಟೀಕಿಸಿದ್ದಾರೆ.