ಸರ್ಕಾರ ರಾಜ್ಯವನ್ನು ಉಡ್ತಾ ಕರ್ನಾಟಕ ಮಾಡುತ್ತಿದೆ

0
8

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸರ್ಕಾರ ರಾಜ್ಯವನ್ನು ಉಡ್ತಾ ಕರ್ನಾಟಕ ಮಾಡುತ್ತಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಕಾಂಗ್ರೆಸ್ ಸರ್ಕಾರದ ಗಾಂಜಾ ಗ್ಯಾರೆಂಟಿಯಿಂದ ಉಡ್ತಾ ಕರ್ನಾಟಕ ಆಗುತ್ತಿದೆ ನಮ್ಮ ಕರುನಾಡು ಕರ್ನಾಟಕ ಕಾಂಗ್ರೆಸ್‌ಸರ್ಕಾರದ ದುರಾಡಳಿತದಿಂದ ರಾಜ್ಯದಲ್ಲಿ ಗಾಂಜಾ ದಂಧೆ ಎಗ್ಗಿಲ್ಲದೆ ನಡೆಯುತ್ತಿದ್ದು ಅಮಾಯಕ ಯುವಕರು ಗಾಂಜಾ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗುತ್ತಿದೆ ಎಂದು ವಿಪಕ್ಷಗಳು ಎಷ್ಟು ಬಾರಿ ಎಚ್ಚರಿಕೆ ನೀಡಿದರೂ ಅದು ಕೇವಲ ರಾಜಕೀಯ ಆರೋಪ ಎಂದು ತಿಪ್ಪೆ ಸಾರಿಸುತ್ತಾ ನಿರ್ಲಕ್ಷ್ಯ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಸರ್ಕಾರ ರಾಜ್ಯವನ್ನು ಉಡ್ತಾ ಕರ್ನಾಟಕ ಮಾಡುತ್ತಿದೆ ಎಂದಿದ್ದಾರೆ.

Previous articleಸಮಸ್ಯೆಗಳ ನಿವಾರಣೆಗೆ ಐದು ಅಂಶಗಳ ಕಾರ್ಯಕ್ರಮ
Next articleಕುಡಿದ ಮತ್ತಿನಲ್ಲಿ ಈಜಲು ಹೋದ ಯುವಕ ನೀರಲ್ಲಿ ಮುಳುಗಿ ಸಾವು