Home ತಾಜಾ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್: ಕ್ರಮಕ್ಕೆ ಆಗ್ರಹ

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್: ಕ್ರಮಕ್ಕೆ ಆಗ್ರಹ

0

ನವಲಗುಂದ: ಸಾಮಾಜಿಕ ಜಾಲತಾಣದಲ್ಲಿ ಅಯ್ಯಪ್ಪ ಸ್ವಾಮಿಯ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ಮೇಲೆ ಕಠಿಣ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಪಟ್ಟಣದ ಶ್ರೀ ಅಯ್ಯಪ್ಪ ಸ್ವಾಮಿ ಕಮೀಟಿ ವತಿಯಿಂದ ತಾಲೂಕಿನ ಎಲ್ಲ ಮಾಲಾಧಾರಿಗಳು ನಗರದ ಅಯ್ಯಪ್ಪನ ಸನ್ನಿಧಿಯಿಂದ ಮೌನವಾಗಿ ಪಾದಯಾತ್ರೆ ಮೂಲಕ ಬಂದು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ನಂತರ ಮಾತನಾಡಿದ ಹುಚ್ಚಪ್ಪ ತೇರದಾಳ ಅವರು ಸಿಂಧನೂರ ನಿವಾಸಿ ಜಗದೀಶ ಕಲಬುರ್ಗಿ ಎಂಬ ವ್ಯಕ್ತಿ ಫೇಸ್‌ಬುಕ್‌ನಲ್ಲಿ ಅಯ್ಯಪ್ಪ ಸ್ವಾಮಿಯ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದು ಎಲ್ಲಾ ಹಿಂದೂ ಧರ್ಮದವರಿಗೂ ಮತ್ತು ಅಯ್ಯಪ್ಪ ಭಕ್ತರ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾನೆ. ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಮುಂದೆ ಈ ರೀತಿ ಹಿಂದೂ ಧರ್ಮದ ಬಗ್ಗೆ ಅವಹೇಳನಾಕಾರಿ ಮಾಡುವವರ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

Exit mobile version