Home News ಸಾಮಾಜಿಕ ಜಾಲತಾಣದಲ್ಲಿ ಬಂದಿದ್ದೆಲ್ಲಾ ಸತ್ಯವಲ್ಲ

ಸಾಮಾಜಿಕ ಜಾಲತಾಣದಲ್ಲಿ ಬಂದಿದ್ದೆಲ್ಲಾ ಸತ್ಯವಲ್ಲ

ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು. ಘಟನೆ ಸಂಬಂಧ ಡಿಸಿಪಿ ತನಿಖೆ ಮಾಡುತ್ತಾರೆ. ವರದಿಯಲ್ಲಿ ಏನು ಬರುತ್ತೋ ಅದರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಸಾಮಾಜಿಕ ಜಾಲತಾಣದಲ್ಲಿ ಬಂದಿದ್ದೆಲ್ಲಾ ಸತ್ಯ ಇರುವುದಿಲ್ಲ. ಪರಿಶೀಲನೆ ನಡೆಸಿ ಸತ್ಯಾಂಶ ಇದ್ದರೇ ಕ್ರಮ ತೆಗೆದುಕೊಳ್ಳುತ್ತೇವೆ. ಅಂಥದ್ದೇನಾದರೂ ಯಾರದ್ದಾದ್ರು ಪ್ರಭಾವ ಇದ್ದರೆ ಪರಿಶೀಲಿಸುತ್ತೇವೆ. ಎಫ್​ಐಆರ್​ ಆದ ತಕ್ಷಣ ಪೊಲಿಸರು ತನಿಖೆ ಆರಂಭಿಸುತ್ತಾರೆ. ತನಿಖೆ ಆಧರಿಸಿ ಮುಂದಿನ ಕ್ರಮ ತೆಗೆದುಕೊಳ್ತಾರೆ ಎಂದು ತಿಳಿಸಿದ್ದಾರೆ. ವಾಟ್ಸ್​​ಆ್ಯಪ್​​, ಸಾಮಾಜಿಕ ಜಾಲತಾಣದಲ್ಲಿ ಬಂದಿದ್ದೆಲ್ಲಾ ಸತ್ಯ ಇರಲ್ಲ. ಅದನ್ನ ಪರಿಶೀಲಿಸಿ ಸತ್ಯ ಇದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

Exit mobile version