Home ನಮ್ಮ ಜಿಲ್ಲೆ ಚಿಕ್ಕಮಗಳೂರು ಸಾಮಾಜಿಕ ನ್ಯಾಯಕ್ಕೆ ಅನುಗುಣವಾಗಿ ಟಿಕೆಟ್ ಹಂಚಿಕೆ

ಸಾಮಾಜಿಕ ನ್ಯಾಯಕ್ಕೆ ಅನುಗುಣವಾಗಿ ಟಿಕೆಟ್ ಹಂಚಿಕೆ

0

ಚಿಕ್ಕಮಗಳೂರು: ಈಶ್ವರಪ್ಪ ಬಂಡಾಯ ಸ್ಪರ್ಧೆ ಬಗ್ಗೆ ಹಿರಿಯ ನಾಯಕರು ಅವರ ಜೊತೆ ಮಾತುಕತೆ ನಡೆಸುತ್ತಾರೆ ಎಂದು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯಿಸಿದರು.
ಶನಿವಾರ ದತ್ತಪೀಠಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿ ಎರಡು ದಿನದಲ್ಲಿ ಎಲ್ಲವೂ ಬಗೆಹರಿಯುತ್ತದೆ ಎಂದು ಹೇಳಿದರು.
ಗೊಂದಲಗಳು ಬಗೆಹರಿಯುತ್ತೆ ಎಂಬ ವಿಶ್ವಾಸ ಇದೆ. ಚರ್ಚೆಗೆ ಅವಕಾಶವಾಗಿರುವುದು ಸತ್ಯ ಎಂದು ಹೇಳಿದರು.
ಹಾವೇರಿ ಟಿಕೆಟ್ ಕಾಂತೇಶ್‌ಗೆ ನೀಡಬೇಕಿತ್ತು ಎಂಬುವುದು ಈಶ್ವರಪ್ಪನವರ ಬಯಕೆಯಾಗಿತ್ತು, ಸಾಮಾಜಿಕ ನ್ಯಾಯಕ್ಕೆ ಅನುಗುಣವಾಗಿ ಟಿಕೆಟ್ ಹಂಚಿಕೆ ಮಾಡಬೇಕಾಗುತ್ತದೆ. ಎಲ್ಲವನ್ನು ಸಮನ್ವಯವಾಗಿಸಿಕೊಂಡು ಹೋಗುವುದು ಪಕ್ಷದ ಜವಾಬ್ದಾರಿ, ಪಕ್ಷ ತೀರ್ಮಾನ ತೆಗೆದುಕೊಳ್ಳುವಾಗ ವ್ಯತ್ಯಾಸವಾಗಿರ ಬಹುದು ಎಂದು ಅವರು ಹೇಳಿದರು.

Exit mobile version