ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿಗೆ ಕಡಿವಾಣ ಹಾಕಬೇಕು
ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿಯಿಂದ ರಾಮನಗರ ಜಿಲ್ಲೆಯಲ್ಲಿ ಇಬ್ಬರು ರೈತರು ಆತ್ಮಹತ್ಯೆಗೆ ಶರಣಾಗಿದ್ದು, ಇದಕ್ಕೆ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷವೇ ಕಾರಣ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ಬಡವರು, ದಿನಗೂಲಿ ನೌಕರರು, ಕಾರ್ಮಿಕರನ್ನು ಸಾಲಗಾರರನ್ನಾಗಿ ಮಾಡಿ ಸಾಲ ವಸೂಲಾತಿ ಹೆಸರಿನಲ್ಲಿ ಮನೆ ಬಾಗಿಲಿಗೆ ಬಂದು ನಿತ್ಯ ಕಿರುಕುಳ ನೀಡುತ್ತಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಪದೇ ಪದೇ ಎಚ್ಚರಿಸಿದರೂ ಕ್ಯಾರೆ ಎನ್ನದ ಕರ್ನಾಟಕ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದ ಇವತ್ತು ಇಬ್ಬರು ರೈತರು ಆತ್ಮಹತ್ಯೆಗೆ ಬಲಿಯಾಗಿದ್ದಾರೆ.
ಸಿಎಂ ಸಿದ್ದರಾಮಯ್ಯನವರೇ, ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು ಮೈಕ್ರೋ ಫೈನಾನ್ಸ್ ಕಂಪನಿಗಳ ದೌರ್ಜನ್ಯಕ್ಕೆ ಕಡಿವಾಣ ಹಾಕದೆ ಹೋದರೆ ಇನ್ನಷ್ಟು ಬಡವರು ಪ್ರಾಣ ಕಳೆದುಕೊಳ್ಳುತ್ತಾರೆ. ಆ ಎಲ್ಲ ಸಾವುಗಳಿಗೂ ನಿಮ್ಮ ಸರ್ಕಾರವೇ ನೇರ ಹೊಣೆ ಹೊರಬೇಕಾಗುತ್ತದೆ ಎಂದಿದ್ದಾರೆ.