ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯನಗರ ಮದುವಣಿಗಿತ್ತಿಯಂತೆ ಸಿಂಗಾರಗೊಂಡಿದೆ. ಸಮ್ಮೇಳನಕ್ಕೆ ಎಲ್ಲ ಸಿದ್ಧತೆಗಳು ಭರದಿಂದ ನಡೆದಿವೆ.
ಇದೇ ಡಿ. 20ರಿಂದ 22ರವರೆಗೆ ನಡೆಯಲಿರುವ ಸಮ್ಮೇಳನಕ್ಕೆ ಪ್ರಧಾನ ವೇದಿಕೆಯ ಪ್ರವೇಶ ದ್ವಾರದಲ್ಲಿ ʼಕೆಆರ್‌ಎಸ್ ಅಣೆಕಟ್ಟೆʼ ಮಾದರಿಯ ಆಕರ್ಷಕ ಪ್ರವೇಶ ದ್ವಾರವನ್ನು ನಿರ್ಮಾಣ ಮಾಡಲಾಗುತ್ತಿದೆ.
ಈ ಪ್ರವೇಶ ದ್ವಾರದ ವಿನ್ಯಾಸವು 40 ಅಡಿ ಎತ್ತರ ಮತ್ತು ಬರೋಬ್ಬರಿ 300 ಅಡಿ ಅಗಲವನ್ನು ಹೊಂದಿದೆ. ಇದಲ್ಲದೇ ಪ್ರವೇಶ ಮತ್ತು ನಿರ್ಗಮನಕ್ಕೆ 20×20 ಚದರ ಅಡಿ ವಿಸ್ತೀರ್ಣದ ಪ್ರತ್ಯೇಕ ಬಾಗಿಲುಗಳನ್ನು ಕೂಡ ನಿರ್ಮಿಸಲಾಗಿದೆ. ಪ್ರವೇಶ ದ್ವಾರಕ್ಕೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಮತ್ತು ಆದಿಚುಂಚನಗಿರಿ ಮಠದ ಬಾಲಗಂಗಾಧರನಾಥ ಸ್ವಾಮೀಜಿ ಅವರ ಹೆಸರು ಇಡಲಾಗಿದೆ.