ಬೆಂಗಳೂರು: ಆಪರೇಷನ್ ಸಿಂಧೂರ ಮೂಲಕ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ ನೆಲೆಗಳ ಮೇಲೆ ಭಾರತೀಯ ಸೈನ್ಯವು ನಡೆಸಿದ ಯಶಸ್ವಿ ದಾಳಿಯ ಕುರಿತಂತೆ ನಟ ಸುದೀಪ್ ಭಾರತೀಯ ಸೇನೆ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಒಬ್ಬ ಭಾರತೀಯನಾಗಿ ಈ ಪವಿತ್ರ ಮಣ್ಣಿನ ಮಗನಾಗಿ, ಪಹಲ್ಗಾಮ್‌ನಲ್ಲಿ ನಡೆದ ಘಟನೆಯಿಂದ ನೋವು ಅನುಭವಿಸಿದೆ. ಇಂದು ನ್ಯಾಯ ಸಿಕ್ಕಿದೆ. ಅದರಂತೆಯೇ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ (Operation Sindoora) ಕೇವಲ ಒಂದು ಧ್ಯೇಯವಲ್ಲ. ಇದು ಪವಿತ್ರ ಪ್ರತಿಜ್ಞೆ. ಉಗ್ರರು ದಾಳಿ ಮಾಡುವ ಮೂಲಕ ಭಾರತದ ಸಿಂಧೂರಕ್ಕೆ ಅಪಮಾನ ಮಾಡಲಾಗಿತ್ತು. ಆದರೆ ನಮ್ಮ ಧೈರ್ಯಶಾಲಿ ಸೈನಿಕರು ನಿಖರತೆಯಿಂದ ಅದರ ಗೌರವವನ್ನು ಪುನಃಸ್ಥಾಪಿಸಿದ್ದಾರೆ. ನಮ್ಮ ಸಶಸ್ತ್ರ ಪಡೆಗಳಿಗೆ ನನ್ನ ವಂದನೆಗಳು ಎಂದಿದ್ದಾರೆ.