ಸಿಎಂ ಏನು ಬೇಕಾದರೂ ಬರೆದುಕೊಳ್ಳಲಿ

0
10

ಬಳ್ಳಾರಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ `ಪೆನ್‌ಡ್ರೈವ್’ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಏನುಬೇಕಾದರೂ ಪತ್ರ ಬರೆದುಕೊಳ್ಳಲಿ. ಕಾನೂನು ಚೌಕಟ್ಟಿನಲ್ಲಿ ಏನು ಮಾಡಬೇಕು ಅದನ್ನು ಮಾಡುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಟಾಂಗ್ ನೀಡಿದರು.
ಜಿಲ್ಲೆಯ ಕುರುಗೋಡು ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಪರ ಗುರುವಾರ ಮತಯಾಚನೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿನ ಸತ್ಯಾಸತ್ಯತೆ ಏನೆಂಬುದು ಗೊತ್ತಾಗಬೇಕು. ಪ್ರಕರಣಕ್ಕೂ ಚುನಾವಣೆಗೂ ಸಂಬಂಧವಿಲ್ಲ. ಅಲ್ಲಿವರೆಗೆ ಯಾವುದೇ ಪ್ರತಿಕ್ರಿಯೆ ನೀಡಲು ಹೋಗಲ್ಲ. ಪ್ರಜ್ವಲ್ ಪ್ರಕರಣಕ್ಕೂ ಚುನಾವಣೆಗೂ ಯಾವುದೇ ಸಂಬಂಧವೂ ಇಲ್ಲ. ಸಿಎಂ ಸಿದ್ದರಾಮಯ್ಯ ಏನುಬೇಕಾದರೂ ಪತ್ರ ಬರೆದುಕೊಳ್ಳಲಿ. ಕಾನೂನು ಚೌಕಟ್ಟಿನಲ್ಲಿ ಏನು ಮಾಡಬೇಕು ಅದನ್ನು ಮಾಡುತ್ತಾರೆ. ಅವರು ವಿದೇಶಕ್ಕೆ ಹೋಗಿದ್ದರ‍್ದೆ, ಬಂದ ಮೇಲೆ ವಿಚಾರಣೆಗೆ ಹೋಗುತ್ತಾರೆ. ಆಗ ಸತ್ಯಾಸತ್ಯತೆ ತಿಳಿಯಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು.

Previous articleಮೋದಿಗೆ ಜಪಮಾಲೆ ನೀಡಿದ ಸಾಧು ಮಹರಾಜ
Next articleಬೆಳಗಾವಿ ವಿಮಾನ ನಿಲ್ದಾಣ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಲಿದೆ