ಹೊಸದಿಲ್ಲಿ: ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಅರವಿಂದ್ ಕೇಜ್ರಿವಾಲ್ ಅವರಿಗೆ 10 ಲಕ್ಷ ರೂಪಾಯಿಗಳ ಜಾಮೀನು ಬಾಂಡ್‌ಗೆ ಒಳಪಟ್ಟು ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ತ್ರಿವಳಿ ಷರತ್ತುಗಳನ್ನು ಕೇಜ್ರಿವಾಲ್ ಈಡೇರಿಸಿದ್ದು ಅದರಂತೆ ಜಾಮೀನು ನೀಡುತ್ತಿರುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.
ಸಿಬಿಐ ತಮ್ಮನ್ನು ಬಂಧಿಸಿರುವುದರ ಸಿಂಧುತ್ವ ಹಾಗೂ ತಮಗೆ ಜಾಮೀನು ನೀಡುವಂತೆ ಕೋರಿ ಕೇಜ್ರಿವಾಲ್ ಅವರು ಎರಡು ಪ್ರತ್ಯೇಕ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದರು. ಎರಡನೇ ಅರ್ಜಿಗೆ ಸಮ್ಮತಿಸಿರುವ ನ್ಯಾಯಾಲಯ ಮೊದಲನೆಯ ಅರ್ಜಿಯನ್ನು ತಿರಸ್ಕರಿಸಿದೆ