ಸಿಎಂ, ಡಿಸಿಎಂ ಹೇಳಿಕೆ ಖಂಡಿಸಿ ಕಾಫಿನಾಡಿನಲ್ಲಿ ಪ್ರತಿಭಟನೆ

0
27

ಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪೊಲೀಸ್ ಅಧಿಕಾರಿಯ ಮೇಲೆ ತೋರಿರುವ ವರ್ತನೆಯನ್ನು ಖಂಡಿಸಿ ಹಾಗೂ ಡಿ.ಕೆ ಶಿವಕುಮಾ‌ರ್ ಹೇಳಿಕೆ ಖಂಡಿಸಿ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

ನಗರದ ಕೋರ್ಟ್ ಬಳಿ ಇರುವ ಗಾಂಧಿ ಪ್ರತಿಮೆ ಮುಂದೆ ಶಾಂತಿಯುತವಾಗಿ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳಾಗಿ ಓಬ್ಬ ಪೊಲೀಸ್ ಅಧಿಕಾರಿಯನ್ನು ಸಾರ್ವಜನಿಕ ಸಭೆಯಲ್ಲಿ ನಿಂದಿಸಿರುವುದನ್ನು ಬಿಜೆಪಿ ಕಾರ್ಯಕರ್ತರು ತೀವ್ರವಾಗಿ ಖಂಡಿಸಿ ಮುಖ್ಯಮಂತ್ರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಸರ್ಕಾರ ವಿರೋಧ ಪಕ್ಷದವರ ಧ್ವನಿ ಅಡಗಿಸಲು ಕೆಲಸ ಮಾಡುತ್ತಿದೆ. ಇದನ್ನ ಬಿಜೆಪಿ ಯಾವುದೇ ಕಾರಣಕ್ಕೂ ಸಹಿಸಲ್ಲ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ರು. ದೇಶದ ಜನರು ಕಾಶ್ಮೀರದ ಘಟನೆಯ ನೋವಲ್ಲಿದ್ದಾರೆ.

ಇಂತಹ ಸಂದರ್ಭದಲ್ಲಿ ನೀವು ಪಾಕಿಸ್ತಾನದ ವಿರುದ್ಧ ಯುದ್ಧ ಬೇಡ ಎಂದು ಸಹಕಾರ ನೀಡುತ್ತೀರಾ ಇದು ದೇಶ ದ್ರೋಹದ ಕೆಲಸ ಅಲ್ಲವೇ ಎಂದು ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಾರೆ.

ಮುಂದಿನ ದಿನಗಳಲ್ಲಿ ಚಿಕ್ಕಮಗಳೂರಿಗೆ ಯಾರೇ ಸಚಿವರು ಬಂದವರು ಅವರ ವಿರುದ್ಧ ಮುತ್ತಿಗೆ ಹಾಕುವ ಕೆಲಸ ಮಾಡುತ್ತೇವೆಂದು ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Previous articleಕಾನೂನು ಸುವ್ಯವಸ್ಥೆಗೆ ಭಂಗವಾದಲ್ಲಿ ಅದಕ್ಕೆ ನೇರ ಹೊಣೆ ಈ ಸರ್ಕಾರ
Next articleಸೆಂಚ್ಯೂರಿ ಚಾಂಪ್‌ಗೆ ಸರ್ಕಾರದಿಂದ ಹತ್ತು ಲಕ್ಷ ಬಹುಮಾನ ಘೋಷಣೆ