ಸಿಎಂ ಬಜೆಟ್ ಮಂಡನೆ: ಪ್ರತಿಪಕ್ಷಗಳಿಂದ ಗದ್ದಲ

0
24

ಬೆಂಗಳೂರು: ಬಜೆಟ್ ಮಂಡನೆ ವೇಳೆ ಪ್ರತಿಪಕ್ಷಗಳಿಂದ ಗದ್ದಲದ ವಾತಾವಾರಣ ಸೃಷ್ಟಿಯಾಗಿದೆ.
ಬಜೆಟ್ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡಿದರು ಎಂದು ಪ್ರತಿಪಕ್ಷಗಳಿಂದ ಗದ್ದಲದ ವಾತಾವರಣ ಸೃಷ್ಟಿಯಾಯಿತು. ಬಜೆಟ್​ ಅನ್ನು ಕೇಂದ್ರದ ವಿರುದ್ಧ ಟೀಕೆಗೆ ಬಳಸಿಕೊಳ್ಳುತ್ತೀರಾ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಕಿಡಿ ಕಾರಿದ್ದಾರೆ. ಈ ವೇಳೆ ಗದ್ದಲದ ವಾತಾವರಣ ಸೃಷ್ಟಿಯಾಯಿತು. ಸ್ಪೀಕರ್ ಯುಟಿ ಖಾದರ್ ಪರಿಪರಿಯಾಗಿ ಬೇಡಿಕೊಂಡರೂ ಪ್ರತಿಪಕ್ಷ ನಾಯಕರು ಆಕ್ರೋಶದ ಮಾತುಗಳನ್ನು ಕಡಿಮೆ ಮಾಡಲಿಲ್ಲ ಈ ಮದ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್‌ ಮಂಡನೆ ಅಡೆತಡೆ ಇಲ್ಲದೆ ನಿರಂತರವಾಗಿ ಸಾಗಿದೆ.

Previous articleರಾಜ್ಯ ಬಜೆಟ್ 2024 ನೇರಪ್ರಸಾರ
Next articleಶ್ರೀರಂಗನಾಥನ ಸನ್ನಿಧಿಯಲ್ಲಿ ವೈಭವಯುತ ಬ್ರಹ್ಮ ರಥೋತ್ಸವ