ಚಿಕ್ಕಮಗಳೂರು: ತಮ್ಮ ಹಗರಣ ಮುಚ್ಚಿಕೊಳ್ಳಲು ಸಿಎಂ ಸಿದ್ದರಾಮಯ್ಯ ಬ್ಲಾಕ್ ಮೇಲ್ ತಂತ್ರಕ್ಕೆ ಮುಂದಾಗಿದ್ದಾರೆ ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಆರೋಪಿಸಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ನಡೆ ನಾನು ಹಗರಣ ಮಾಡಿದ್ದೇನೆ. ನಿಮ್ಮ ಹಗರಣ ಹೊರ ತೆಗಿಯುತ್ತೇನೆ ಎನ್ನುವಂತಿದೆ. ಇದು ಆಶ್ಚರ್ಯ ಹಾಗೂ ಹಾಸ್ಯಾಸ್ಪದ ಎಂದು ಹೇಳಿದರು.
ವಾಲ್ಮೀಕಿ ನಿಗಮ ಹಾಗೂ ಮೂಡ ಹಗರಣ ಹೊರಬರುವವರೆಗೂ ಬಿಜೆಪಿ ಹಗರಣಗಳು ಸಿಎಂ ಸಿದ್ದರಾಮಯ್ಯ ಅವರಿಗೆ ಗೊತ್ತಿರಲಿಲ್ಲವೇ? ಎಂದು ಪ್ರಶ್ನಿಸಿದ್ದ ಅವರು ನಿಮ್ಮದೇ ಸರ್ಕಾರ ಇರುವಾಗ ಬಿಜೆಪಿ ಹಗರಣಗಳ ಬಗ್ಗೆ ಇದುವರೆಗೆ ಏಕೆ ತನಿಖೆ ನಡೆಸಲಿಲ್ಲ. ನಿಮ್ಮ ಕಾಲ ಬುಡಕ್ಕೆ ಬಂದಾಗ ಬಿಜೆಪಿ ಬಗ್ಗೆ ದೂರುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.