ಬೆಂಗಳೂರು: ಹತ್ರಾಸ್ ಘಟನೆ ಕುರಿತು ಸಿಎಂ ಯೋಗಿಗೆ ರಾಹುಲ್ ಗಾಂಧಿ ಪತ್ರ ಬರೆದಿದ್ದಾರೆ.
ಹತ್ರಾಸ್ ಘಟನೆ ಕುರಿತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದು, ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ಮೊತ್ತವನ್ನು ಹೆಚ್ಚಿಸುವಂತೆ ಒತ್ತಾಯಿಸಿದ್ದಾರೆ. ಉತ್ತರ ಪ್ರದೇಶ ಸರ್ಕಾರ ಘೋಷಿಸಿರುವ ಪರಿಹಾರ ತೀರಾ ಅಸಮರ್ಪಕವಾಗಿದೆ ಎಂದು ಬರೆದಿದ್ದಾರೆ. ರಾಹುಲ್ ಗಾಂಧಿ ಸಾಮಾಜಿಕ ಜಾಲತಾಣದಲ್ಲಿ ಪತ್ರವನ್ನು ಹಂಚಿಕೊಂಡಿದ್ದಾರೆ.

