ಬೆಂಗಳೂರು : ಮುಖ್ಯಮಂತ್ರಿ ಸಲಹೆಗಾರರ ಹುದ್ದೆಗೆ ಅಳಂದ ಕ್ಷೇತ್ರದ ಶಾಸಕ ಬಿ.ಆರ್.ಪಾಟೀಲ್ ರಾಜೀನಾಮೆ ನೀಡಿದ್ದಾರೆ.
ಮುಖ್ಯಮಂತ್ರಿಯ ರಾಜಕೀಯ ಸಲಹೆಗಾರರಾಗಿದ್ದ ಬಿ.ಆರ್.ಪಾಟೀಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ. ರಾಜೀನಾಮೆ ನಿರ್ಧಾರಕ್ಕೆ ಕಾರಣ ತಿಳಿದು ಬಂದಿಲ್ಲ. ಬಿ.ಆರ್.ಪಾಟೀಲ್ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹಳೆಯ ಸ್ನೇಹಿತ ಹಾಗೂ ಪರಮಾಪ್ತರಲ್ಲಿ ಒಬ್ಬರು.