ಸಿಎಂ ಸಿದ್ದರಾಮಯ್ಯಗೆ ‘ಪತ್ರಿಕಾ ವಿತರಕರ ಬಂಧು’ ಬಿರುದು ನೀಡಿ ಸನ್ಮಾನ

0
15

ಬೆಂಗಳೂರು: ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ “ಪತ್ರಿಕಾ ವಿತರಕರ ಬಂಧು” ಬಿರುದು ನೀಡಿ ಸನ್ಮಾನಿಸಲಾಯಿತು.
ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಸಂಘದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ “ಪತ್ರಿಕಾ ವಿತರಕರ ಬಂಧು” ಎನ್ನುವ ಬಿರುದು ನೀಡಿ ಸನ್ಮಾನಿಸಿದ್ದಾರೆ. ಪತ್ರಿಕಾ ವಿತರಕರ ನಾಲ್ಕನೇ ರಾಜ್ಯ ಸಮ್ಮೇಳನದಲ್ಲಿ ಈ ಬಿರುದು ನೀಡಲಾಗಿದ್ದು, ಸಮ್ಮೇಳನದಲ್ಲಿ ಮುಖ್ಯಮಂತ್ರಿಗಳು ಉಪಸ್ಥಿತರಿಲ್ಲದ ಕಾರಣ ಇಂದು ಕಾವೇರಿ ನಿವಾಸಕ್ಕೆ ಆಗಮಿಸಿ ಗೌರವಿಸಿದ್ದಾರೆ, ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಪತ್ರಿಕಾ ವಿತರಕರ ಸಂಘದ ರಾಜ್ಯಾಧ್ಯಕ್ಷ ಶಂಭುಲಿಂಗ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಮಾಜಿ ವಿಧಾನ ಪರಿಷತ್ ಸದಸ್ಯ ಗೋಪಾಲ್ ಅವರು ಉಪಸ್ಥಿತರಿದ್ದು, ಪತ್ರಿಕಾ ವಿತರಕರ ಸಮುದಾಯಕ್ಕೆ ಸರ್ಕಾರ ನೀಡಿರುವ ನೆರವನ್ನು ಸ್ಮರಿಸಿ ಧನ್ಯವಾದ ಸಲ್ಲಿಸಿದರು.

Previous articleಬಸವಣ್ಣನವರು ದೇವರು, ಭಕ್ತರ ನಡುವಿನ ಮಧ್ಯವರ್ತಿ ತೆಗೆದು ಹಾಕಿದ್ದರು
Next articleಕೈಗಾರಿಕಾ ಶಕ್ತಿ ಕೇಂದ್ರವಾಗಿ ಬದಲಾಗುತ್ತಿದೆ ಕರ್ನಾಟಕ!