ಸಿಎಂ ಸಿದ್ದರಾಮಯ್ಯ ಇಂದು ಯಾದಗಿರಿಗೆ ಭೇಟಿ

0
51

ಯಾದಗಿರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಯಾದಗಿರಿ ಪ್ರವಾಸ ಕೈಗೊಳ್ಳಲಿದ್ದು 416 ಕೋಟಿ ರೂಪಾಯಿ ವೆಚ್ಚದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
ಬೆಳಗ್ಗೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ 12 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣ, 6 ಸಮುದಾಯ ಆರೋಗ್ಯ ಕೇಂದ್ರ, 16 ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವ ಯೋಜನೆ ಸೇರಿದಂತೆ ಒಟ್ಟು 416 ಕೋಟಿ ರೂಪಾಯಿ ವೆಚ್ಚದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಚಿವರಾದ ದಿನೇಶ್ ಗುಂಡೂರಾವ್, ಶರಣಬಸಪ್ಪ ದರ್ಶನಾಪೂರ, ಡಿ. ಸುಧಾಕರ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.

Previous articleಭಾರೀ ಮಳೆಗೆ ಧಾರವಾಡ ಜಿಲ್ಲೆಯಲ್ಲಿ ೧೨೦ ಮನೆಗಳು ಕುಸಿತ, ೨ ಪ್ರಾಣಹಾನಿ
Next articleಬಸ್-ಕಾರು ನಡುವೆ ಭೀಕರ ಅಪಘಾತ: ಇಬ್ಬರು ಸಾವು