ಸಿಎಂ ಸಿದ್ದರಾಮಯ್ಯ ರಾಜೀನಾಮೆ ದಿನ ಬಂದೇ ಬರುತ್ತೆ

0
19

ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ಪರಿಸ್ಥಿತಿ ಬಂದೇ ಬರುತ್ತದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.
ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಆಯುಕ್ತ ದಿನೇಶ್‌ಕುಮಾರ್ ಅವರನ್ನು ಕಾಂಗ್ರೆಸ್ ಸರ್ಕಾರ ಅಮಾನತು ಮಾಡಿದೆ. ಯಾವ ಕಾರಣಕ್ಕಾಗಿ ಅಮಾನತು ಮಾಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಒಬ್ಬ ಆಯುಕ್ತರೇ ಅಮಾನತುಗೊಂಡಿರುವುದರಿಂದ ಅಲ್ಲಿಗೆ ಹಗರಣ ನಡೆದಿದೆ ಎಂಬುದನ್ನು ಸರ್ಕಾರವೇ ಒಪ್ಪಿಕೊಂಡಿದೆ. ಮುಂದೆ ಸಿಎಂ ಸಿದ್ದರಾಮಯ್ಯ ಕೂಡಾ ರಾಜೀನಾಮೆ ಕೊಡಲೇಬೇಕಾಗುತ್ತದೆ, ಕಾದು ನೋಡಿ ಎಂದರು.

Previous articleಪ್ರಾಥಮಿಕ ಶಿಕ್ಷಕರ ಮುಂಬಡ್ತಿ ಇನ್ನಿತರ ಬೇಡಿಕೆ ಪರಿಶೀಲಿಸಿ ತಿಂಗಳೊಳಗೆ ಕ್ರಮ
Next articleರಾಜ್ಯದ ಚುಕ್ಕಾಣಿ ಬದಲಾವಣೆ ಆದರೂ ಆಶ್ಚರ್ಯ ಇಲ್ಲ