ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ

0
37

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅನುಮತಿ ನೀಡಿದ್ದಾರೆ.

ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಈ ಕುರಿತಾದ ಆದೇಶವನ್ನು ಅವರು ರವಾನೆ ಮಾಡಿದ್ದಾರೆ. ದೂರು ನೀಡಿದ್ದ ದಿನವೇ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ನೋಟೀಸ್ ಜಾರಿ ಮಾಡಿದ್ದರು. ಇದೀಗ, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ

ಇದು, ಸಿದ್ದರಾಮಯ್ಯ ಅವರ ರಾಜಕೀಯದಲ್ಲಿ ದೊಡ್ಡ ಸವಾಲು ಮತ್ತು ಸಂಕಷ್ಟವನ್ನು ತಂದೊಡ್ಡಿದೆ ಎಂದು ಹೇಳಲಾಗುತ್ತಿದೆ. ಮೂರು ದೂರುಗಳನ್ನು ಒಟ್ಟಿಗೆ ಸೇರಿಸಿ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ, ಮೈಸೂರು ಮೂಲದ ಸ್ನೇಹಮಯಿ ಕೃಷ್ಣ ಹಾಗೂ ಪ್ರದೀಪ್‌ ಎನ್ನುವವರು  ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಈ ಮೂರೂ ಅರ್ಜಿಗಳನ್ನು ಒಟ್ಟಿಗೆ ಸೇರಿಸಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದೆ. ಮುಖ್ಯ ಕಾರ್ಯದರ್ಶಿ ಕಚೇರಿಗೆ ನೋಟಿಫಿಕೇಷನ್‌ ಅನ್ನೂ ಪ್ರತಿಯನ್ನೂ ನೀಡಲಾಗಿದೆ

Previous articleಅಂಗನವಾಡಿ ಸಾಮಾನು ಕಾಳಸಂತೆಯಲ್ಲಿ ಮಾರಾಟ
Next articleಭಗವಂತನ ಕೃಪೆಯಿಂದ ಸಕ್ಸಸ್ ಆದಿವಿ: ಕನ್ಹಾಯ್ಯಾ ನಾಯ್ಡು