ಸಿಎಂ ಸ್ಥಾನಕ್ಕೆ ರಾಜೀನಾಮೆ

0
17

ನವದೆಹಲಿ: ಅರವಿಂದ್ ಕೇಜ್ರಿವಾಲ್ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ರಾಜಿನಾಮೆ ಕುರಿತಂತೆ ಇತ್ತಿಚೆಗೆ ಅರವಿಂದ್ ಕೇಜ್ರಿವಾಲ್ ತಮ್ಮ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಎರಡು ದಿನಗಳಲ್ಲಿ ರಾಜೀನಾಮೆ ನೀಡುವ ನಿರ್ಧಾರವನ್ನು ಪ್ರಕಟಿಸಿದ್ದರು. ಸಾರ್ವಜನಿಕರು ತಮ್ಮ ಪ್ರಾಮಾಣಿಕತೆಯನ್ನು ದೃಢಪಡಿಸುವವರೆಗೂ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ ಎಂದ ಅವರು ಜೈಲಿನಿಂದ ಹೊರಬಂದ ನಂತರ “ಅಗ್ನಿ ಪರೀಕ್ಷೆ”ಗೆ ಒಳಗಾಗುವ ಇಂಗಿತವನ್ನು ವ್ಯಕ್ತಪಡಿಸಿದ್ದರು.

Previous articleಹೊಟ್ಟೆ ನೋವು: ನದಿಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ
Next articleಬಂಟ್ವಾಳ ಮುಂದುವರೆದ ಬಿಗಿ ಭದ್ರತೆ: ಮೂವರ ವಿರುದ್ಧ ಎಫ್‌ಐಆರ್