ಸಿಎಂ ಸ್ಥಾನದ ಬಗ್ಗೆ ಯಾವುದೇ ಗೊಂದಲವಿಲ್ಲ

0
12

ಬೆಂಗಳೂರು: ಸಿದ್ಧರಾಮಯ್ಯ ಮುಖ್ಯಮಂತ್ರಿಗಳಾಗಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಆ ಹುದ್ದೆ ಖಾಲಿ ಇಲ್ಲ ಎಂದು ನಾನು ಹೇಳಿದ್ದೇನೆ. ಅದು ವಾಸ್ತವ. ಏನಿದೆಯೋ ಅದನ್ನು ಹೇಳಿದ್ದೇನಷ್ಟೆ. ಸಿಎಂ ಸ್ಥಾನದ ಬಗ್ಗೆ ಕಾಂಗ್ರೆಸ್ಸಿನಲ್ಲಿ ಯಾವ ಗೊಂದಲವೂ ಇಲ್ಲ. ನಾವೆಲ್ಲರೂ ಚೆನ್ನಾಗಿಯೇ ಇದ್ದೇವೆ. ಗೊಂದಲವಿರುವುದು ಸುದ್ದಿ ಮಾಧ್ಯಮಗಳಲ್ಲಿ ಮಾತ್ರ ಎಂದು ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.
ಮುಖ್ಯಮಂತ್ರಿಗಳನ್ನು ಮಂಗಳವಾರ ಅವರ ನಿವಾಸದಲ್ಲಿ ಭೇಟಿ ಮಾಡಿ, ಸಂಕ್ರಾಂತಿಯ ಶುಭಾಶಯ ತಿಳಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇವತ್ತಿನ ಭೇಟಿಯಲ್ಲಿ ಯಾವ ರಾಜಕೀಯವೂ ಚರ್ಚೆಯಾಗಿಲ್ಲ. ಸಿಎಂ ಬದಲಾವಣೆ, ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ, ಜಾತಿಗಣತಿ ವರದಿ ಇತ್ಯಾದಿ ಯಾವ ಸಮಸ್ಯೆಗಳೂ ಪಕ್ಷದಲ್ಲಿ ಇಲ್ಲ. ಇವೆಲ್ಲವೂಗಳ ಬಗ್ಗೆಯೂ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ. ಸೋಮವಾರ ನಡೆದ ಪಕ್ಷದ ಶಾಸಕಾಂಗ ಸಭೆಯಲ್ಲಿ ಕೂಡ ಸುರ್ಜೇವಾಲಾ ಇದನ್ನೇ ಸ್ಪಷ್ಟವಾಗಿ ಹೇಳಿದ್ದಾರೆ. ಪರಮೇಶ್ವರ್, ರಾಜಣ್ಣ ಕಾರಣಾಂತರಗಳಿಂದ ಸಭಗೆ ಬಂದಿರಲಿಲ್ಲವಷ್ಟೆ ಎಂದು ಅವರು ಹೇಳಿದ್ದಾರೆ.

Previous articleಗೋವಿನ ಕೆಚ್ಚಲು ಕತ್ತರಿಸಿದಾತ ವಿಚಿತ್ರ ಮನಸ್ಸಿನ ವಿಕ್ಷಿಪ್ತ ವ್ಯಕ್ತಿ
Next articleಕುಂಭ ಮೇಳದಲ್ಲಿ ೨ನೇ ದಿನ ೩.೫ಕೋಟಿ ಭಕ್ತರ ಸ್ನಾನ