Home ಅಪರಾಧ ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಸೇರಿ ನಾಲ್ವರು ಸಾವು

ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಸೇರಿ ನಾಲ್ವರು ಸಾವು

0

ಯಾದಗಿರಿ: ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಸೇರಿ ನಾಲ್ವರು ಸಾವನ್ನಪ್ಪಿರುವ ದುರ್ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಜಿನಕೇರಾ ತಾಂಡಾದಲ್ಲಿ ಸೋಮವಾರ ನಡೆದಿದೆ.
ಕಿಶನ್ ಜಾಧವ(33), ಸುನಿಬಾಯಿ ರಾಠೋಡ್(30), ಚನ್ನಪ್ಪ ಜಾಧವ(24) ಹಾಗೂ ನೇನು ಜಾಧವ(18) ಮೃತಪಟ್ಟ ದುರ್ದೈವಿಗಳಾಗಿದ್ದಾರೆ.

ಪ್ರಕರಣ ವಿವರ
ಯಾದಗಿರಿ ತಾಲೂಕಿನ ಜಿನಕೇರಾ ತಾಂಡದ ಜಮೀನೊಂದರಲ್ಲಿ ಈರುಳ್ಳಿ ಬೆಳೆ ನಾಟಿ ಮಾಡಲು ಮೃತರು ಸೇರಿದಂತೆ 10ಕ್ಕೂ ಹೆಚ್ಚು ಕೂಲಿ ಕಾರ್ಮಿಕರು ತೆರಳಿದ್ದು, ಮಧ್ಯಾಹ್ನ ಏಕಾಏಕಿ ಮಳೆ ಸುರಿದ ಪರಿಣಾಮ ಅಲ್ಲಿಯೇ ಸಮೀಪದಲ್ಲಿದ್ದ ದುರ್ಗಮ್ಮದೇವಿ ದೇವಸ್ಥಾನದ ಶೆಡ್‌ನಲ್ಲಿ ರಕ್ಷಣೆ ಪಡೆದಿದ್ದಾರೆ. ಈ ವೇಳೆ ಸಿಡಿಲು ಬಡಿದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೆ, ಇನ್ನೋರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆದಲ್ಲಿ ಮೃತಪಟ್ಟಿದ್ದಾರೆ. ಇನ್ನೂ ಘಟನೆಯಲ್ಲಿ ಹಲವರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version