ಸಿಡಿಲು ಬಡಿದು ನಾಲ್ವರು ಸಾವು: ಕುಟುಂಬಸ್ಥರಿಗೆ ಸಚಿವ ದರ್ಶನಾಪುರ ಸಾಂತ್ವನ

0
10

ಯಾದಗಿರಿ: ಸಿಡಿಲು ಬಡಿದು ನಾಲ್ವರು ಮೃತಪಟ್ಟ ಯಾದಗಿರಿ ತಾಲೂಕಿನ ಜಿನಕೇರಾ ತಾಂಡಕ್ಕೆ ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ನೂಂದ ಕುಟುಂಬಕ್ಕೆ ನೋವನ್ನು ತಡೆದುಕೊಳ್ಳುವ ಶಕ್ತಿ ನೀಡಲಿ. ಸರ್ಕಾರದಿಂದ ಏನೆಲ್ಲ ಪರಿಹಾರ ಇದೆಯೋ ಅದನ್ನು ಆ ಕುಟುಂಬಗಳಿಗೆ ಒದಗಿಸಲು ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದರು. ಸಿಡಿಲು ಬಡಿದು ನೇನು(18), ಚೇನು(22), ಕಿಶನ್(30) ಮತ್ತು ಸುಮಿ ಬಾಯಿ(30) ಮೃತಪಟ್ಟಿದ್ದಾರೆ. ಇನ್ನೂ 8 ಜನಕ್ಕೆ ಗಾಯಗಳಾಗಿದ್ದು ಒಬ್ಬರು ಡಿಸ್ಚಾರ್ಜ್ ಆಗಿದ್ದು, ಇನ್ನುಳಿದವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಸಚಿವರು ಹಾರೈಸಿದರು.
ಇದಕ್ಕೂ ಮುಂಚೆ ಸಿಡಿಲಿನಿಂದ ಗಾಯಗೊಂಡು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವನ್ನು ಸಚಿವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಸುಶೀಲಾ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ತಹಶೀಲ್ದಾರ್ ಸುರೇಶ ಅಂಕಲಗಿ ಇತರರಿದ್ದರು.

Previous articleಮುಡಾ ಹಗರಣ: ರಾಜ್ಯಪಾಲರ ಕ್ರಮಕ್ಕೆ ಹೈಕೋರ್ಟ್‌ ಸಮ್ಮತಿ
Next articleಜೈಲಾಧಿಕಾರಿಗಳ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು: ದರ್ಶನ್ ವಕೀಲ