Home ಅಪರಾಧ ಸಿಡಿಲು ಬಡಿದು ಮಹಿಳೆ ಸಾವು

ಸಿಡಿಲು ಬಡಿದು ಮಹಿಳೆ ಸಾವು

0

ಯಲಬುರ್ಗಾ: ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಸಿಡಿಲು ಬಡಿದು ಕೂಲಿ ಕೆಲಸಕ್ಕೆ ತೆರಳಿದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಶುಕ್ರವಾರ(ಆಗಸ್ಟ್ 9) ಸಂಜೆ ನಡೆದಿದೆ. ಮಮತಾ ರಾಜಮಹ್ಮದ ಬಳಿಗೇರ(32) ಮೃತ ದುರ್ದೈವಿ. ಹೆಸರು ಬುಡ್ಡಿ ಬಿಡಿಸಲು ಕೂಲಿ ಕೆಲಸಕ್ಕೆ ತೆರಳಿದ್ದ ವೇಳೆ ಮಳೆ ಬಂದ ಹಿನ್ನಲೆಯಲ್ಲಿ ಅಲ್ಲಿಯೇ ಹತ್ತಿರದಲ್ಲಿದ್ದ ಬನ್ನಿ ಗಿಡದ ಅಡಿಯಲ್ಲಿ ನಿಂತ ಸಂದರ್ಭದಲ್ಲಿ ಸಿಡಿಲು ಬಡಿದಿದೆ. ಮೃತ ಮಹಿಳೆಗೆ ಮೂವರು ಮಕ್ಕಳಿದ್ದಾರೆ. ಬಡತನದ ಹಿನ್ನಲೆಯಲ್ಲಿ ಕೆಲಸಕ್ಕೆ ಹೋಗಿ ಜೀವನ ನಡೆಸುತ್ತಿದ್ದರು. ಇವರ ಪತಿ ಗೌಂಡಿ ಕೆಲಸ ಮಾಡುತ್ತಿದ್ದಾರೆ. ಸರಕಾರ ಇವರ ಕುಟುಂಬದ ನೆರವಿಗೆ ಧಾವಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version