ಬೆಂಗಳೂರು: ಸಿದ್ದಗಂಗಾ ಶ್ರೀಗಳಿಗೆ ಭಾರತರತ್ನ ಸಿಗಬೇಕು ಎಂಬುದು ನಮ್ಮ ಆಸೆಯಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ
ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು ನಗರೋತ್ಥಾನ ಯೋಜನೆಯಡಿ ಕಾಮಗಾರಿಯ ಬಿಲ್ ಪಾಸು ಮಾಡಲು ಅಧಿಕಾರಿಗಳು ಸತಾಯಿಸುತ್ತಿರುವ ಬಗ್ಗೆ ದೂರು ನೀಡಿದರೆ ತನಿಖೆ ನಡೆಸಿ, ಕ್ರಮ ವಹಿಸಲಾಗುವುದು.
ಅಡ್ವಾಣಿಯವರಿಗೆ ಭಾರತ ರತ್ನ ನೀಡಿರುವ ಬಗ್ಗೆ ನಮ್ಮ ಅಭ್ಯಂತರವಿಲ್ಲ. ನಾನು ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮಿಗಳಿಗೆ ಕೊಡಬೇಕು ಎಂದು ಪತ್ರ ಬರೆದಿದ್ದೆ. ಸಿದ್ದಗಂಗಾ ಶ್ರೀಗಳಿಗೆ ಭಾರತರತ್ನ ಸಿಗಬೇಕು ಎಂಬುದು ನಮ್ಮ ಆಸೆಯಾಗಿತ್ತು ಎಂದಿದ್ದಾರೆ.