Home ತಾಜಾ ಸುದ್ದಿ ಸಿದ್ದರಾಮಯ್ಯನವರ ದಕ್ಷ ಆಡಳಿತಕ್ಕೆ ಸಿಕ್ಕ ಜಯ

ಸಿದ್ದರಾಮಯ್ಯನವರ ದಕ್ಷ ಆಡಳಿತಕ್ಕೆ ಸಿಕ್ಕ ಜಯ

0

ಇಳಕಲ್: ಮುಖ್ಯಮಂತ್ರಿ ಸಿದ್ದರಾಮಯ್ಯನವರ ದಕ್ಷ ಆಡಳಿತಕ್ಕೆ ಮೂರೂ ವಿಧಾನಸಭಾ ಮತಕ್ಷೇತ್ರಗಳಲ್ಲಿ ಜಯ ಸಿಕ್ಕಿದೆ ಎಂದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.
ಸಂಡೂರ ಕ್ಷೇತ್ರವನ್ನು ಉಳಿಸಿಕೊಳ್ಳುವ ಜೊತೆಗೆ ಬಿಜೆಪಿಯ ಶಿಗ್ಗಾವಿ ಕ್ಷೇತ್ರವನ್ನು ಮತ್ತು ಜೆಡಿಎಸ್‌ನ ಚನ್ನಪಟ್ಟಣ ಕ್ಷೇತ್ರವನ್ನು ಗೆದ್ದಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರ ಚಾಕಚಕ್ಯತೆಯನ್ನು ಎಲ್ಲೆಡೆ ಮೆರೆದಿದ್ದಾರೆ ಎಂದು ಅಭಿಪ್ರಾಯಪಟ್ಟರು.

Exit mobile version