ಸಿದ್ದರಾಮಯ್ಯರನ್ನು ಮುಟ್ಟಿದರೆ ಬಿಜೆಪಿ ಸರ್ವನಾಶ

0
23

ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಮುಟ್ಟಿದ್ರೆ ಬಿಜೆಪಿ ಸರ್ವನಾಶ ಆಗುತ್ತದೆ ಎಂದು ಶಾಸಕ ಎನ್.ಎಚ್. ಕೋನರಡ್ಡಿ ತಿಳಿಸಿದರು.
ಅವರು ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ, ಬಿಜೆಪಿ ಇಂತಹ ದುಸ್ಸಾಹಸಕ್ಕೆ ಕೈ ಹಾಕಬಾರದಿತ್ತು. ರಾಜ್ಯಪಾಲರಿಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಕೊಡುವ ಮನಸಿರಲಿಲ್ಲ, ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ಅನುಮತಿ ಕೊಟ್ಟಿರಬಹುದು ಎಂದು ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾತನಾಡುವ ಶಕ್ತಿ ಯಾರಿಗೂ ಇಲ್ಲ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಲ್ಲು ಬಂಡೆಯಂತೆ ನಿಂತು ಹೋರಾಟ ಮಾಡುವುದಾಗಿ ಹೇಳಿದ್ದಾರೆ. ಆಗಸ್ಟ್ ೧೯ಕ್ಕೆ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ನಾವೆಲ್ಲ ಸಿದ್ದರಾಮಯ್ಯ ಪರ ನಿಲ್ಲುತ್ತೇವೆ ಎಂದು ತಿಳಿಸಿದರು.

Previous articleಭ್ರಷ್ಟಾಚಾರದ ಜನಕ ಕಾಂಗ್ರೆಸ್ ಪಕ್ಷ
Next articleಗ್ಯಾಂಗ್ ರೇಪ್: ಕರ್ನಾಟಕವೇ ತಲೆ ತಗ್ಗಿಸೋ ಘಟನೆ