ಸಿದ್ದರಾಮಯ್ಯ ಆಯ್ಕೆ ಅಸಿಂಧು ಕೋರಿದ್ದ ಅರ್ಜಿ ವಜಾ

0
32

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಕಾರ್ಡ್‌ ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗಿದೆ ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಯ್ಕೆ ಅಸಿಂಧುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಇಂದು ವಜಾಗೊಳಿಸಿದೆ.
ಸಿದ್ದರಾಮಯ್ಯ ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆ ಮೈಸೂರಿನ ವರುಣ ಹೋಬಳಿಯ ಕೂಡನಹಳ್ಳಿ ಗ್ರಾಮದ ಕೆ.ಎಂ.ಶಂಕರ್‌ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ನ್ಯಾಯಮೂರ್ತಿ ಎಸ್‌ ಸುನಿಲ್‌ ದತ್‌ ಯಾದವ್‌ ಅವರ ನೇತೃತ್ವದ ಏಕಸದಸ್ಯ ಪೀಠ ತಿರಸ್ಕರಿಸಿದೆ.

Previous articleಚಾಲಕನ ನಿಯಂತ್ರಣ ತಪ್ಪಿ ಬ್ರಿಜ್ ಬಳಿ ಉರುಳಿದ ಸಾರಿಗೆ ಬಸ್ ತಪ್ಪಿದ ಭಾರಿ ಅನಾಹುತ
Next articleತರಬೇತಿ ವಿಮಾನ ಪತನ: ಪೈಲಟ್ ಸಾವು