ಸಿದ್ದರಾಮಯ್ಯ ಕೂಡಲೇ ಕ್ಷಮೆಯಾಚಿಸಬೇಕು: ಯತ್ನಾಳ ಆಗ್ರಹ

0
17

ಬೆಂಗಳೂರು: ಬೆಳಗಾವಿಯಲ್ಲಿ ಕೇಂದ್ರ ಸರ್ಕಾರದ ಬೆಲೆ ಏರಿಕೆ ಧೋರಣೆಯನ್ನು ಖಂಡಿಸಿ ಕಾಂಗ್ರೆಸ್‌ ಆಯೋಜಿಸಿರುವ ಜನಾಕ್ರೋಶ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪೊಲೀಸ್‌ ಅಧಿಕಾರ ವಿರುದ್ಧವೇ ಗರಂ ಆದ ಘಟನೆಯ ವೇಳೆ ನಡೆದುಕೊಂಡ ರೀತಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಗರಂ ಆಗಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಕರ್ತವ್ಯ ನಿರತ ಹೆಚ್ಚುವರಿ ಎಸ್.ಪಿ ಮೇಲೆ ಕೈ ಕೈ ಮಿಲಾಯಿಸುವ ಹಂತಕ್ಕೆ ಮುಖ್ಯ ಮಂತ್ರಿಗಳು ಹೋಗಿದ್ದು ಅಕ್ಷಮ್ಯ. ಅಧಿಕಾರಿಗಳೊಂದಿಗೆ ಸೌಜನ್ಯತೆಯಿಂದ ವರ್ತಿಸಬೇಕಾಗಿದ್ದ ಮುಖ್ಯ ಮಂತ್ರಿಗಳು ಆಕ್ರಮಣಕಾರಿಯಾಗಿ, ಅನುಚಿತವಾಗಿ ವರ್ತಿಸುತ್ತಿರುವುದು ತರವಲ್ಲ. ಈ ನಿರಂಕುಶ ನಡವಳಿಕೆ ನಿಜಕ್ಕೂ ಖಂಡನಾರ್ಹ. ಹಗಲಿರುಳು ಟೊಂಕಕಟ್ಟಿ ದುಡಿಯುವ ಪೊಲೀಸರ ಮನೋಸ್ಥೈರ್ಯವನ್ನು ಹೆಚ್ಚಿಸುವ ಪ್ರಯತ್ನ ಮಾಡಬೇಕೆ ಹೊರತು ಸಾರ್ವಜನಿಕವಾಗಿ ಅವರಿಗೆ ಅವಮಾನಿಸುವ ಕೆಲಸ ಆಗಬಾರದು. ಸಿದ್ದರಾಮಯ್ಯನವರು ಕೂಡಲೇ ಅಧಿಕಾರಿಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

Previous article18 ಶಾಸಕರ ಅಮಾನತು ರದ್ದುಪಡಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ
Next articleನಾವು ಬಿಜೆಪಿ – RSSನ ಗೊಡ್ಡು ಬೆದರಿಕೆಗಳಿಗೆ ಜಗ್ಗಲ್ಲ-ಬಗ್ಗಲ್ಲ